Categories
ಕರಾವಳಿ ರಾಜ್ಯ

4 ಮಂದಿ ವಿದ್ಯಾರ್ಥಿಗಳ ಶವ ಪತ್ತೆ!

4 ಮಂದಿ ವಿದ್ಯಾರ್ಥಿಗಳ ಶವ ಪತ್ತೆ!
– ಸುರತ್ಕಲ್‌ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ
– ನದಿಯ ದಡದಲ್ಲಿ ಮಕ್ಕಳ ಶವ

NAMMUR EXPRESS NEWS
ಸುರತ್ಕಲ್: ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ ಮೃತ ಮಕ್ಕಳನ್ನು ಯಶ್ಚಿತ್ , ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ ವಿಶ್ವನಾಥ್ ಅವರ ಪುತ್ರ ನಿರೂಪ್, ದೇವದಾಸ್ ಅವರ ಮಗ ಅನ್ನಿತ್(15) ಎಂದು ಗುರುತಿಸಲಾಗಿದೆ.

ಏನಿದು ಕೇಸ್?

ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು. ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ನ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು.

ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.