ಕರಾವಳಿಗೂ ಕಾಲಿಟ್ಟ ಮಂಗನ ಕಾಯಲೆ!
– ಉಡುಪಿಯಲ್ಲಿ ಈ ವರ್ಷದ ಮೊದಲ ಮಂಗನ ಕಾಯಿಲೆ ಪ್ರಕರಣ ದಾಖಲು
– ರಾಜ್ಯದಲ್ಲಿ ಈವರೆಗೆ 117 ಮಂದಿಗೆ ಪಾಸಿಟಿವ್: 3 ಮಂದಿ ಸಾವು
NAMMUR EXPRESS NEWS
ಉಡುಪಿ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು ಶುಕ್ರವಾರ ಉಡುಪಿಯಲ್ಲಿ 1 ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ರಾಜ್ಯದಲ್ಲಿ ಈವರೆಗೆ 117 ಮಂದಿಗೆ ಪಾಸಿಟಿವ್ ಬಂದಿದ್ದು, 82 ಮಂದಿ ಗುಣಮುಖರಾಗಿದ್ದಾರೆ 3 ಮಂದಿ ಮರಣ ಹೊಂದಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ.ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಒಂದು ಪ್ರಕರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಐ. ಗಡಾದ್ ಹೇಳಿದ್ದಾರೆ.