ಕರಾವಳಿಯಲ್ಲಿ ಪುತ್ತಿಲ ಪರಿವಾರದ ಸದ್ದು!
– ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು
– ಆರ್ಯಾಪು ಮರು ಚುಣಾವಣೆಯಲ್ಲಿ ಪುತ್ತಿಲ ಪರಿವಾರ್ ಬೆಂಬಲಿತ ಅಭ್ಯರ್ಥಿ ಜಯಭೇರಿ
NAMMUR EXPRESS NEWS
ಪುತ್ತೂರು: ರಾಜಕಾರಣ ಏನು ಬೇಕಾದ್ರೂ ಆಗಬಹುದು ಎಂಬುದಕ್ಕೆ ಪುತ್ತೂರು ನಿದರ್ಶನ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧೆ ಮಾಡಿ ರಾಜ್ಯ ಮಟ್ಟದಲ್ಲಿ ಸುದ್ದಿ ಮಾಡಿದ್ದ ಅರುಣ್ ಪುತ್ತಿಲ ಅವರ ಪುತ್ತಿಲ ಪರಿವಾರ ಈಗ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮಕಾಡೆ ಮಲಗಿಸಿದ ಪುತ್ತಿಲ ಪರಿವಾರ್ ಪುತ್ತಿಲ ಪರಿವಾರ್ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಗಳಿಸುವ ಮೂಲಕ ಪುತ್ತೂರು ತಾಲೂಕಿನಲ್ಲಿ ಪುತ್ತಿಲ ಪರಿವಾರಕ್ಕೆ ಮೊದಲ ಜಯವನ್ನು ತಂದುಕೊಟ್ಟಿದ್ದಾರೆ.
ವಾರ್ಡ್ ನಂ-2 ಹಿಂದುಳಿದ ವರ್ಗ-ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ದಿವಂಗತ ರುಕ್ಕಯ್ಯ ಮೂಲ್ಯರವರ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಗೊಂಡಿದೆ.
ಇದರಲ್ಲಿ ಪುತ್ತಿಲ ಪರಿವಾರ್ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499, ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು 353, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ ಕೇವಲ 140 ಮತಗಳನ್ನು ಪಡೆದು ಕೊನೆಯ ಸ್ಥಾನಕ್ಕೆ ಪಡೆದುಕೊಂಡಿದ್ದಾರೆ.
ಕರಾವಳಿಯಲ್ಲಿ ಬಿಜೆಪಿಗೆ ಬಂಡಾಯ
ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲು ಅರುಣ್ ಪುತ್ತಿಲ ಬಂಡಾಯವೂ ಪ್ರಮುಖ ಕಾರಣ. ಬಿಜೆಪಿಗೆ ಇದು ಎಚ್ಚರಿಕೆ ಕೂಡ. ಹಿಂದೂ ಸಂಘಟನೆಗಳ ಪ್ರಮುಖರನ್ನು ಕಡೆಗಣನೆ ಮಾಡಿರುವುದೇ ಸೋಲಿಗೆ ಕಾರಣ ಎನ್ನಲಾಗುತ್ತಿದೆ.
ಇದನ್ನೂ ಓದಿ : ಖಾಸಗಿ ಚಾನಲ್ ವಿರುದ್ದ ಕಿಮ್ಮನೆ 5 ಕೋಟಿ ಕೇಸ್!?
HOW TO APPLY : NEET-UG COUNSELLING 2023