ಟಾಪ್ ನ್ಯೂಸ್ ಕರಾವಳಿ
ಉಪನ್ಯಾಸಕಿ ಜೀವಕ್ಕೆ ಕುತ್ತು ತಂದ ಛತ್ರಿ!
– ಬೈಕಲ್ಲಿ ಕೊಡೆ ಬಿಡಿಸುವಾಗ ಬಿದ್ದು ಚಿಕಿತ್ಸೆಗೆ ಸ್ಪಂದಿಸದೇ ಸಾವು
– ಮಂಗಳೂರು: ತ್ಯಾಜ್ಯ ವಾಹನದಲ್ಲಿ ನಾಯಿ ಸಾಗಾಟ, ಎಚ್ಚರಿಕೆ!
– ಕಾಸರಗೋಡು: ವ್ಯಕ್ತಿ ಮೃತ ದೇಹ ತೋಡಿನಲ್ಲಿ ಪತ್ತೆ
– ಉಡುಪಿ: ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ!
NAMMUR EXPRESS NEWS
ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕ ಬಿಡಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ ಬಳಿಕ ಆಪರೇಶನ್ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡ ರಾತ್ರಿ ಇಹಲೋಕ ತ್ಯಜಿಸಿದರು ಎಂದು ತಿಳಿದುಬಂದಿದೆ. ಸುಳ್ಯದ ಬೀರಮಂಗಲ ನಿವಾಸಿ, ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ.ಅಚ್ಚುತ ಪೂಜಾರಿಯವರ ಪತ್ನಿಯಾಗಿದ್ದಾರೆ.
ಮಂಗಳೂರು: ತ್ಯಾಜ್ಯ ವಾಹನದಲ್ಲಿ ನಾಯಿ ಸಾಗಾಟ, ಎಚ್ಚರಿಕೆ!
ಮಂಗಳೂರು: ಸಾಕು ನಾಯಿಯೊಂದನ್ನು ಜೀವಂತವಾಗಿಯೇ ತ್ಯಾಜ್ಯ ವಿಲೇವಾರಿ ಮಾಡುವ ವಾಹನಕ್ಕೆ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನದ ಚಾಲಕನಿಗೆ ಪಾಲಿಕೆಯಿಂದ ಎಚ್ಚರಿಕೆ ನೀಡಲಾಗಿದೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ಡೊಂಗರಕೇರಿಯ ಮನೆ ಯೊಂದರ ನಾಯಿಯು ತೊಂದರೆ ನೀಡುತ್ತಿದೆ ಎಂದು ಮನೆಯವರು ಅದನ್ನು ತ್ಯಾಜ್ಯ ವಿಲೇವಾರಿ ಮಾಡುವ ವಾಹನಕ್ಕೆ ತುಂಬಿಸಿ ಸಾಗಿಸುತ್ತಿದ್ದ ವೀಡಿಯೋ ಬಹಿರಂಗವಾಗಿ ಪ್ರಾಣಿ ಪ್ರಿಯರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪ್ರಕರಣದ ಕುರಿತು ಪಾಲಿಕೆಯ ಗಮನಕ್ಕೆ ಬಂದಿದ್ದು, ಅದರಂತೆ ವಾಹನದ ಚಾಲಕರನ್ನು ಕರೆದು ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ.
ಕಾಸರಗೋಡು: ವ್ಯಕ್ತಿ ಮೃತ ದೇಹ ತೋಡಿನಲ್ಲಿ ಪತ್ತೆ
ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿ ಯೋರ್ವರ ಮೃತ ದೇಹ ತೋಡಿನಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ನೆಕ್ರಾಜೆಯಲ್ಲಿ ನಡೆದಿದೆ.
ನೆಕ್ರಾಜೆ ಉದ್ದಂ ನಿವಾಸಿ ಪ್ರವೀಣ್ ಶೆಟ್ಟಿ ,(40) ಮೃತಪಟ್ಟವರು . ಸೆ. 11ರಂದು ಸಂಜೆ ಮನೆ ಸಮೀಪದ ತೋಡಿನಲ್ಲಿ ಮೃತ ದೇಹ ಪತ್ತೆಯಾಗಿದೆ. ಸೆ. 10ರಂದು ಮಂಗಳವಾರ ಸಂಜೆಯಿಂದ ನಾಪತ್ತೆ ಯಾಗಿದ್ದರು. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಉಡುಪಿ: ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ!
ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಿ ನಿಲಯ್ಕೆ ಅಕ್ರಮ ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸ್ಥಳೀಯ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಈತ ಸೆ.1ರಂದು ನಸುಕಿನ ವೇಳೆ ವಸತಿ ನಿಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಯೊಬ್ಬಳ ಕೈ ಎಳೆದು ಕಿರುಕುಳ ನೀಡಿ ಪರಾರಿಯಾಗಿದ್ದನು.
ಈ ಬಗ್ಗೆ ವಸತಿ ನಿಲಯದ ವಾರ್ಡನ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.