ಬೆಳ್ತಂಗಡಿ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್
– ಮಂಗಳೂರು:ಅಕ್ರಮ ಸರಾಯಿ: ಇಬ್ಬರ ಬಂಧನ
– ಉಡುಪಿ ಕೃಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ ಸ್ಪರ್ಧೆ
– ಬೆಳ್ತಂಗಡಿಯ ಹೊಳೆಯಲ್ಲಿ ಮೃತದೇಹ ಪತ್ತೆ!
NAMMUR EXPRESS NEWS : ಬೆಳ್ತಂಗಡಿ ತಾಲೂಕು ಸೇರಿದಂತೆ ಹಲವೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ತಾಲೂಕು ನಿಟ್ಟೆ ಅಷ್ಟೊಟ್ಟು ನಿವಾಸಿ ಸುರೇಶ ನಿವಾಸಿ ಸುರೇಶ ಕೆ ಪೂಜಾರಿ (50) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಕೆಲ ದಿನಗಳಿಂದ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈತ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟಿಯೊಂದನ್ನು ಕಳ್ಳತನಗೈದು ಅದರಲ್ಲಿ ಸುತ್ತಾಡುತ್ತಾ ಒಬ್ಬಂಟಿಯಾಗಿ ರಾತ್ರಿವೇಳೆ ಹಲವೆಡೆ ಕಳ್ಳತನ ಕೃತ್ಯವೆಸಗುತ್ತಿದ್ದನೆಂದು ತನಿಖೆಯಿಂದ ದೃಢಪಟ್ಟಿದೆ.
ಅಕ್ರಮ ಸರಾಯಿ ಮಾರಾಟ ದಂಧೆ ಇಬ್ಬರ ಬಂಧನ
ಮಂಗಳೂರಿನ ಬಿಜೈ ಬಳಿ ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ಚಿದಾನಂದ(35), ಸ್ವಾಮಿ ಗೌಡ (56) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5750 ರೂ ಮೌಲ್ಯದ 90 ಎಮ್ ಎಲ್ ನ 128 ಮಧ್ಯದ ಪ್ಯಾಕೇಟ್ ಮತ್ತು ರೂ 2500 ನಗದನ್ನು ಸ್ವಾಧೀನಪಡಿಸಿಕೊಂಡಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಉಡುಪಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ!
ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭೀಮ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾಳುಗಳಿಗೆ ಪ್ರಸಾದವನ್ನಿತ್ತು ಅನುಗ್ರಹಿಸಿದರು.
ನಂತರ ಸಾಂಪ್ರದಾಯಿಕ ಚುಕ್ಕಿ ರಂಗವಲ್ಲಿ ಸ್ಪರ್ಧೆ ನಡೆಯಿತು. ಪರ್ಯಾಯ ಮಠದ ದಿವಾನರು, ಕಾರ್ಯಕರ್ತರು ಭಾಗವಹಿಸಿದ್ದರು.
ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಹೊಳೆ ಬದಿ ಕೊಳೆತ ಸ್ಥಿತಿಯಲ್ಲಿ ಗುರುತು ಪತ್ತೆ ಸಿಗದ ಮೃತದೇಹವೊಂದು ಆ. 27ರಂದು ಪತ್ತೆಯಾಗಿದೆ. ಯಾದವ ಎಂಬವರು ಹಳ್ಳಿಮದ್ದಿಗೆಂದು ಮದ್ದಿನ ಗಿಡಗಳನ್ನು ಸಂಗ್ರಹಿಸಲು ಕಾಡಿಗೆ ತೆರಳಿದ್ದಾಗ ಹೊಳೆಯ ಬದಿಯಲ್ಲಿರುವ ಕಲ್ಲುಗಳ ಮಧ್ಯೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸು ಮೃತಪಟ್ಟು ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.