ಬಂಟ್ವಾಳ: ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ ಆರೋಪಿ ಅರೆಸ್ಟ್.!
– ಸುಳ್ಯ: ಉರುಳಿಗೆ ಬಿದ್ದು ಚಿರತೆ ಸಾವು: ಇಬ್ಬರ ಬಂಧನ
– ಪುತ್ತೂರು: ಶಾಸಕರ ಸ್ವಂತ ವೆಚ್ಚದಲ್ಲಿ 600 ಬಡವರಿಗೆ ನಿವೇಶನ
– ಸುರತ್ಕಲ್: ಕಾಂಪೌಂಡ್ ಕುಸಿದು ಕೂಲಿ ಕಾರ್ಮಿಕ ಮೃತ್ಯು
NAMMUR EXPRESS NEWS
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ. ಈ ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಯುವತಿ ಸ್ನಾನದ ವಿಡಿಯೋ: ಆರೋಪಿ ಅರೆಸ್ಟ್.!
ಬಂಟ್ವಾಳ: ಯುವತಿಯೋರ್ವಳು ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದು ಗಮನಕ್ಕೆ ಬಂದಿದೆ.
ಯುವತಿ ಇದನ್ನು ಕಂಡು ಜೋರಾಗಿ ಬೊಬ್ಬೆ ಹಾಕಿದ್ದು, ಅಪರಿಚಿತ ಆರೋಪಿ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದ. ಯುವತಿಯ ಬೊಬ್ಬೆ ಕೇಳಿ ಇವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ,ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಆದರೆ ಆತನ ಪತ್ತೆಯಾಗಿರಲಿಲ್ಲ. ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸರ ತಂಡ ಬಂಧಿಸಿದ್ದು, ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸಕರ ಸ್ವಂತ ವೆಚ್ಚದಲ್ಲಿ 600 ಬಡವರಿಗೆ ನಿವೇಶನ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಬಡವರು ಮನೆ, ಅನ್ನ, ಬಟ್ಟೆ, ಬೆಳಕು ಇಲ್ಲದೆ ಕೊರಗಬಾರದು. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ನಿಂದ ಈಗಾಗಲೇ ನೋಂದಣಿಯಾಗಿರುವ 600 ಮಂದಿ ಬಡವರಿಗೆ ನಿವೇಶನ ನೀಡಲಾಗುವುದು. ಇದಕ್ಕಾಗಿ ವಿಟ್ಲ ಭಾಗದಲ್ಲಿ 5 ಎಕರೆ ಭೂಮಿ ಖರೀದಿ ಮಾಡಲಾಗಿದೆ’ ಎಂದು ಶಾಸಕ ಅಶೋಕ್ ಕುಮಾರ್ ಘೋಷಣೆ ಮಾಡಿದ್ದಾರೆ.
ಪುತ್ತೂರು ನಗರಸಭೆಯ ಹಳೆಯ ಕಚೇರಿ ಕಟ್ಟಡದಲ್ಲಿ ಸೋಮವಾರ ಆರಂಭಿಸಲಾದ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭದ ಬಳಿಕ ಅವರು ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು.
‘ಪ್ರತಿ ಕುಟುಂಬಕ್ಕೆ 3 ಸೆಂಟ್ಸ್ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಜತೆಗೆ, ಗ್ರಾಮೀಣ ಭಾಗದಲ್ಲಿ 1 ಸಾವಿರ ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ನಿವೇಶನ ಕಾದಿರಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಅವರು ತಿಳಿಸಿದರು.
ಕಾಂಪೌಂಡ್ ಕುಸಿದು ಕೂಲಿ ಕಾರ್ಮಿಕ ಮೃತ್ಯು
ಕಾಂಪೌಂಡ್ ಕುಸಿದು ಓರ್ವ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ವರದಿಯಾಗಿದೆ. ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್ ಕುಸಿದಿದೆ. ಮೃತಪಟ್ಟ ಕೂಲಿ ಕಾರ್ಮಿಕನನ್ನು ಹನೀಫ್ ಎಂದು ಗುರುತಿಸಲಾಗಿದೆ. ಕೃಷ್ಣಾಪುರ ನಿವಾಸಿ ಶರೀಫ್ ಎಂಬವರು ಮಹಾನಗರ ಪಾಲಿಕೆಗೆ ಸಂಬಂಧಿಸಿದ ಚರಂಡಿಯ ಗುತ್ತಿಗೆ ಪಡೆದುಕೊಂಡು ಕೆಲಸ ಮಾಡಿಸುತ್ತಿದ್ದರು. ಹನೀಫ್ ಅವರು ಶರೀಫ್ ಅವರೊಂದಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಚರಂಡಿಗೆ ಅಗೆಯುತ್ತಿದ್ದ ಸಂದರ್ಭ ಪಕ್ಕದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಹನೀಫ್ ಅವರ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ.bತಕ್ಷಣ ಅವರೊಂದಿಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಸ್ಥಳೀಯರು ಹನೀಫ್ ಅವರನ್ನು ಸುರತ್ಕಲ್ನ ಪದ್ಮಾವತಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ.