ಟಾಪ್ ನ್ಯೂಸ್ ಕರಾವಳಿ
ಮೆದುಳು ಜ್ವರ ಉಲ್ಬಣಗೊಂಡು ಎಸೆಸ್ಸೆಲ್ಸಿ ವಿದ್ಯಾರ್ಥಿನಿ ಮೃತ್ಯು!
– ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟು
– ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಪೊಲೀಸರ ವಶಕ್ಕೆ!
– ಉಜಿರೆಯ ಖಾಸಗಿ ಶಾಲೆಯಲ್ಲಿ ನಡೆದ ಘಟನೆ
NAMMUR EXPRESS NEWS
ಮಂಗಳೂರು: ಮೆದುಳು ಜ್ವರ ಉಲ್ಪಣಗೊಂಡು ಚಿಕಿತ್ಸೆ ಫಲಿಸದ ಪರಿಣಾಮ 10ನೇ ತರಗತಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಶಿರ್ತಾಡಿ ಖಾಸಗಿ ಹೈಸ್ಕೂಲ್ನ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟದ್ದಾರೆ. ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿ. ಮೂಲತಃ ವಾಲ್ಪಾಡಿಯವರಾದ ಇವರು ಪ್ರಸ್ತುತ ಮೂಡುಬಿದಿರೆಯಲ್ಲಿ ನೆಲೆಸಿದ್ದಾರೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಪೊಲೀಸರ ವಶಕ್ಕೆ!
ಉಜಿರೆ: 6ನೇ ತರಗತಿ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕನೊಬ್ಬ ಕಳೆದ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಖಾಸಗಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಶಿಕ್ಷಕ ವಿರಾಜ್ ಜೈನ್ ಕಳೆದ ಜೂನ್ ನಿಂದ ದೂರು ನೀಡುವ ದಿನದವರೆಗೂ ಕೂಡ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಮಾರ್ಚ್ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹಠ ಹಿಡಿಉ ಕುಳಿತಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್ ಜೈನ್ ಕಳೆದ ವರ್ಷ ಜೂನ್ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.