ಸುಳ್ಯದಲ್ಲಿ 10 ಅಡಿ ಉದ್ದ ಕುಸಿದ ಭೂಮಿ!
– ಭೂಮಿ ಬಿರುಕೋ… ಕಳಪೆ ಕಾಮಗಾರಿಯೋ..?
– ಉಡುಪಿ: ರಾಮ ಮಂದಿರದಲ್ಲಿ ಕಳ್ಳತನಕ್ಕೆ ಯತ್ನ!
– ಪಡುಬಿದ್ರೆ: ಭೀಕರ ರಸ್ತೆ ಅಪಘಾತ: ಓರ್ವ ಸಾವು
– ಉಜಿರೆ: ಗೃಹಿಣಿ ಶವ ಬಾವಿಯಲ್ಲಿ ಪತ್ತೆ: ಗಂಡ ಅರೆಸ್ಟ್
NAMMUR EXPRESS NEWS
ಸುಳ್ಯದ ಹೋಟೆಲ್ ಮುಂಭಾಗದಲ್ಲಿ ಏಕಾಏಕಿ ಕುಸಿದ ಭೂಮಿ ಫೋಟೋ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ. ಇಲ್ಲಿ ಅವೈಜ್ಞಾನಿಕ ಕಾಮಗಾರಿಯ ಶಂಕೆ ವ್ಯಕ್ತವಾಗಿದೆ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಕುಸಿದ ಭೂಮಿ ಇದರ ಪರಿಣಾಮ ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದ್ದು, ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಶಂಕ ವ್ಯಕ್ತವಾಗಿದೆ ಸುಳ್ಯದಲ್ಲಿ ಜೋರಾದ ಮಳೆ ಸುರಿದಿದ್ದು, ಈ ಹಿನ್ನಲೆಯಲ್ಲಿ ಭೂಕುಸಿತ ಆಗಿದೆ ಎನ್ನುವುದು ಕೆಲವರ ಹೇಳಿಕೆ.
ಆದರೆ ಇಂಟರ್ ಲಾಕ್ ಅಳವಡಿಸಿರುವ ಭೂಮಿಯಡಿ ನೀರು ರಭಸವಾಗಿ ನುಗ್ಗದಿದ್ದರೂ ಭೂಕುಸಿತ ಹೇಗೆ ಸಂಭವಿಸಿತು ಎನ್ನುವುದು ಪ್ರಶ್ನೆ ಎದುರಾಗಿದೆ. ಭೂಕುಸಿತವಾದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್ಫಾರ್ಮರ್ ಇತ್ತು. ಭೂಕುಸಿತವಾದ ಜಾಗದಲ್ಲಿ ಟ್ರಾನ್ಸ್ಫಾರ್ಮರ್ ಧರಾಶಾಯಿಯಾಗಿದೆ. ಅದೃಷ್ಟವಶಾತ್ ವಿದ್ಯುತ್ ಕಂಬ ಹಾಗೂ ಟ್ರಾನ್ಸ್ಫಾರ್ಮರ್ ಬೀಳುವ ಸಂದರ್ಭ ಪವರ್ ಕಟ್ ಆಗಿದ್ದ ಕಾರಣ ದುರಂತ ತಪ್ಪಿದೆ. ಪ್ರತಿ ದಿನವೂ ಹೋಟೆಲ್ ಗೆ ಬರುವ ಕಾರುಗಳು ಅಲ್ಲಿ ಕೂಡ ಪಾರ್ಕಿಂಗ್ ಮಾಡುತ್ತಿದ್ದರು. ಆದರೆ ಇಂದು ಅದೃಷ್ಟವಶಾತ್ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ. ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಪಡುಬಿದ್ರೆ: ಭೀಕರ ರಸ್ತೆ ಅಪಘಾತ: ಓರ್ವ ಸಾವು
ಪಡುಬಿದ್ರೆ: ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ನಡೆದ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ ಮೃತಪಟ್ಟವನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಮಂಗಳೂರು ಕಡೆಗೆ ತೆರಳುವ ಖಾಸಗಿ ಬಸ್, ಪಡುಬಿದ್ರೆ ಪೇಟೆಯ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವೇಳೆ ಹಿಂದಿನಿಂದ ಬಂದ ಬೈಕ್, ಬಸ್ ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು.ಈ ಸಮಯ ಟ್ಯಾಂಕ ಹರಿದ ಪರಿಣಾಮ ಪ್ರಜ್ವಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಈ ಸಂಬಂಧ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ರಾಮ ಮಂದಿರದಲ್ಲಿ ಹೆಲ್ಮೆಟ್ ಧರಿಸಿ ಕಳ್ಳತನಕ್ಕೆ ಯತ್ನ!
ಉಡುಪಿ: ತಲೆಗೆ ಹೆಲೆಟ್ ಧರಿಸಿದ ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನಕ್ಕೆ ಯತ್ನಿಸಿದ ಘಟನೆ ಮರವಂತೆಯ ಶ್ರೀ ರಾಮ ಮಂದಿರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ. ಕಳ್ಳತನ ಮಾಡಲು ಬಂದ ವ್ಯಕ್ತಿ ತಲೆಗೆ ಹೆಲೆಟ್ ಧರಿಸಿದ್ದು ಸಿ.ಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು ವ್ಯಕ್ತಿ ಯಾರೆಂಬುದು ಪತ್ತೆಯಾಗಿಲ್ಲ.
ಗೃಹಿಣಿ ಶವ ಬಾವಿಯಲ್ಲಿ ಪತ್ತೆ : ಪತಿ ಬಂಧನ!
ಉಜಿರೆ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಶುಕ್ರವಾರ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆನಡೆಸುತ್ತಿದ್ದಾರೆ. ಬೆಳಾಲು ಗ್ರಾಮದ ಮಾಚಾರು ಕೆಂಪನೊಟ್ಟು ನಿವಾಸಿ ಶಶಿಕಲಾ (27) ಮೃತಪಟ್ಟವರು. ಪತಿ ಸುಧಾಕರ ನಾಯ್ಕ (30)ನನ್ನು ಬಂಧಿಸಲಾಗಿದೆ. ಶಶಿಕಲಾ ಹಾಗೂ ಸುಧಾಕರ್ ನಾಯ್ಕ ಸಂಬಂಧಿಕರಾಗಿದ್ದು, ಪ್ರೀತಿಸಿ 7 ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತಿ ಸುಧಾಕರ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ. ಇವರಿಬ್ಬರು ಇಲ್ಲಿನ ತೋಟದ ಮನೆಯಲ್ಲಿಯೇ ವಾಸಿಸುತ್ತಿದ್ದರು. ದಂಪತಿಗೆ 6 ವರ್ಷದ ಮಗಳು ಅಜ್ಜಿಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.