100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ..!
– ಚಾರ್ಮಾಡಿ ಘಾಟಿಯಲ್ಲಿ ಘಟನೆ: ಜೀವ ಉಳಿಯಿತು
ಮುಲ್ಕಿ: ಕಾರು-ಬೈಕ್ ಭೀಕರ ಅಪಘಾತ: ಯುವತಿ ಸಾವು!
ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಆಯುತ್ತಿದ್ದ ಮಕ್ಕಳ ರಕ್ಷಣೆ
ಮೂಡುಬಿದಿರೆ: ಜಿಲ್ಲಾ ಕಂಬಳ ಸಮಿತಿ ಸಭೆ; ವೇಳಾಪಟ್ಟಿ ಅಂತಿಮ
ಉಡುಪಿ: ನದಿನಲ್ಲಿ ಅಪರಿಚಿತ ಶವ ಪತ್ತೆ
ಕುಂದಾಪುರ : ಮನೆಗೆ ಅಕ್ರಮ ಪ್ರವೇಶ; ಜೀವ ಬೆದರಿಕೆ
ಶಿರಸಿ: ಅರಣ್ಯ ಪ್ರದೇಶದಲ್ಲಿ ಅಪರಿಚಿತ ಶವ ಪತ್ತೆ
NAMMUR EXPRESS NEWS
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ನಡೆದಿದ್ದು ಕೂದಲೆಳೆ ಅಂತರದಲ್ಲಿ ಇಬ್ಬರು ಪಾರಾಗಿದ್ದಾರೆ. ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿದ್ದ ಲಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಉರುಳಿ ಬಿದ್ದು ಈ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಪಲ್ಟಿಯಾಗುತ್ತಿದ್ದಂತೆ 100 ಅಡಿ ಪ್ರಪಾತದಲ್ಲಿ ಮರಕ್ಕೆ ಸಿಕ್ಕಿಕೊಂಡಿತ್ತು. ಪ್ರಪಾತದಲ್ಲಿ ಬೀಳಲಿದ್ದ ಇಬ್ಬರ ಜೀವ ಮರ ಉಳಿಸಿದೆ. ಕೂಡಲೇ ಮಾಹಿತಿ ಪಡೆದ ಸ್ಥಳಿಯರು ಲಾರಿ ಚಾಲಕ-ಕ್ಲೀನರನ್ನು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ
ಕಾರು-ಬೈಕ್ ಭೀಕರ ಅಪಘಾತ: ಯುವತಿ ಸಾವು!
ಮುಲ್ಕಿ: ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹ ಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳದ ಬಾಕ್ರಬೈಲ್ ನಿವಾಸಿ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು ಗಾಯಾಳು ಬೈಕ್ ಸವಾರನನ್ನು ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ. ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಮಲ್ಪೆ ಬಂದರಿನಲ್ಲಿ ಮೀನು ಆಯುತ್ತಿದ್ದ ಮಕ್ಕಳ ರಕ್ಷಣೆ!
ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸದಲ್ಲಿ ತೊಡಗಿದ್ದು ಮಕ್ಕಳು ಹಾಗೂ ಮಗುವನ್ನು ಹಿಡಿದುಕೊಂಡು ಭಿಕ್ಷೆ ಬೇಡುತ್ತಿದ್ದ ಇಬ್ಬರು ತಾಯಿ ಜೊತೆ ಇದ್ದ ಮಗುವನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿಯವರ ಆದೇಶದಂತೆ ಒಬ್ಬ ಬಾಲಕನಿಗೆ ಬಾಲಕರ ಬಾಲ ಮಂದಿರ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಬಾಲಕಿಯರ ಬಾಲ ಮಂದಿರದಲ್ಲಿ ಪುನರ್ ವಸತಿ ಕಲ್ಪಿಸಲಾಯಿತು, ಇಬ್ಬರು ತಾಯಿ ಮಗುವನ್ನು ಸಮಾಜ ಕಲ್ಯಾಣ ಇಲಾಖೆಯವರ ವಶಕ್ಕೆ ಒಪ್ಪಿಸಲಾಯಿತು.
ಜಿಲ್ಲಾ ಕಂಬಳ ಸಮಿತಿ ಸಭೆ; ವೇಳಾಪಟ್ಟಿ ಅಂತಿಮ
ಮೂಡುಬಿದಿರೆ: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಂಬಳ ಸಮಿತಿಯ ಪ್ರಥಮ ಸಭೆಯನ್ನು ಸೆ. 18ರ ಅಪರಾಹ್ನ 3ಕ್ಕೆ ಮೂಡುಬಿದಿರೆ ಕೋಟಿ ಚೆನ್ನಯ ಕಂಬಳ ಕರೆಯ ಬಳಿಯ ಸೃಷ್ಟಿ ಸಮಿತಿಯ ಪ್ರಥಮ ಸಭೆಯನ್ನು ಕಂಬಳ ಸಮಿತಿಯ ನೂತನ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಸಭೆಯಲ್ಲಿ ಮುಂದಿನ ಕಂಬಳಗಳ ದಿನಾಂಕಗಳನ್ನು ಅಂತಿಮ ಗೊಳಿಸಲಾಗುವುದು ಮತ್ತು ಬೆಂಗಳೂರಲ್ಲಿ ನಡೆಯಲಿರುವ ಕಂಬಳದ ಬಗ್ಗೆ ಚರ್ಚಿಸಲಾಗುವುದು. ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ಪೋಷಕರು, ಕಂಬಳದ ತೀರ್ಪುಗಾರರು, ಓಟಗಾರರು, ಕೋಣಗಳ ಸೇವಾನಿರತರು, ಜನಪ್ರತಿನಿಧಿಗಳು, ಅಭಿಮಾನಿಗಳು ಭಾಗವಹಿಸಿ ಸಲಹೆ ನೀಡಬೇಕು ಎಂದು ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ನದಿನಲ್ಲಿ ಅಪರಿಚಿತ ಶವ ಪತ್ತೆ
ಮಲ್ಪೆ: ಕಲ್ಯಾಣಪುರ ಸುವರ್ಣ ನದಿಯಲ್ಲಿ ಅಪರಿಚಿತ ಪುರುಷನ ಮೃತದೇಹ ತೇಲುತ್ತಿದ್ದ ರೀತಿಯಲ್ಲಿ ಪತ್ತೆಯಾಗಿದೆ. ವಯಸ್ಸು ಸುಮಾರು 28-30 ವರ್ಷ ಆಗಿದ್ದು, ನೀರಿಗೆ ಬಿದ್ದು ಎರಡು ದಿನ ಅಗಿರಬಹುದೆಂದು ಅಂದಾಜಿಸಲಾಗಿದೆ.ಸ್ಥಳೀಯರು ಮೃತದೇಹವನ್ನು ದಡಕ್ಕೆ ಸೇರಿಸಿದ್ದು, ಮೃತರ ಮೈಮೇಲೆ ನೀಲಿ ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಇದೆ. ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದರಬಹುದೆಂದು ಶಂಕಿಸಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಗೆ ಅಕ್ರಮ ಪ್ರವೇಶ; ಜೀವ ಬೆದರಿಕೆ
ಕುಂದಾಪುರ: ಕೋಣಿ ಗ್ರಾಮದ ಎಚ್ಎಮ್ಟಿ ರಸ್ತೆಯಲ್ಲಿ ರುವ ಶ್ರೀಗಿರಿ ನಿವಾಸ ಎನ್ನುವಲ್ಲಿ ರೋಹಿಣಿ ಅವರ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಹಾಕಿದ ಕುರಿತು ಪ್ರಕರಣ ದಾಖಲಾಗಿದೆ. ರೋಹಿಣಿ ಅವರು ಸಹೋದರಿ ಸುಮಾ ಆರ್. ಶೇರೆಗಾರ್ ಬಳಿ ಮನೆ ಕಟ್ಟುವಾಗ ಪಡೆದ ಸಾಲದ ಹಣ 8 ಲಕ್ಷ ರೂ. ಗಳಿಗೆ ಹೆಚ್ಚಿನ ಬಡ್ಡಿ ಹಾಕಿ ನೀಡಬೇಕು. ಇಲ್ಲವಾದರೆ ಮನೆಯ ಅರ್ಧ ಜಾಗವನ್ನು ಬರೆದುಕೊಡಬೇಕು ಎಂದು ರಂಪಾಟ ಮಾಡಿದ್ದು, ಆಗ ನೆರೆಮನೆಯ ಅಭಿಷೇಕ್ ಜತೆಗೂಡಿ ಸುಮಾ ಹಲ್ಲೆ ಮಾಡಿದ್ದು, ರೋಹಿಣಿ ಅವರ ಪತಿ ರಮೇಶ್ ಬಿಡಿಸಿದ್ದರು. ಆರೋಪಿಗಳು ಇಬ್ಬರಿಗೂ ಬೈದು 15 ದಿನದೊಳಗಾಗಿ 4 ಲಕ್ಷ ರೂ. ಹಣ ನೀಡಬೇಕು ಎಂದು ಜೀವ ಬೆದರಿಕೆ ಹಾಕಿದ್ದಾಗಿ ಪ್ರಕರಣ ದಾಖಲಾಗಿದೆ.
ವಡ್ಡಿನಕೊಪ್ಪ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಶವ ಪತ್ತೆ
ಶಿರಸಿ: ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡಿನಕೊಪ್ಪ ರಸ್ತೆ ಪಕ್ಕದ ಅರಣ್ಯದಲ್ಲಿ ಶವವೊಂದು ಪತ್ತೆಯಾಗಿದೆ. ಅಜಮಾಸು 45 ರಿಂದ 50 ವರ್ಷ ವಯಸ್ಸಿನ ಗಂಡಸಿನ ಮೃತದೇಹದ ಮೇಲೆ ಗೋಣಿಚೀಲ ಹಾಗು ಸೊಪ್ಪಿನಿಂದ ಮುಚ್ಚಿಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಯಾರೋ ಕೊಲೆಗೈದು ರಸ್ತೆಬದಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,