ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
– ಮಾದಕ ವಸ್ತು ಸಾಗಣೆ ಮಾಡುತ್ತಿರುವವರು ಅರೆಸ್ಟ್!
– ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
– ಮಂಗಳೂರು: ಸಿಕ್ಕಿಬಿದ್ದ ಇಬ್ಬರು ಗೋ ಕಳ್ಳರು.!
NAMMUR EXPRESS NEWS
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ’ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಭಾಗಿ ಮಳೆಯಾಗುವ ಸಾಧ್ಯತೆಯಿದೆ. ಮತ್ತು ಬಿರುಗಾಳಿಯು ಸಹಿತ ಮಳೆ ಬರುವ ಸಾಧ್ಯತೆಗಳಿವೆ’ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾದಕ ವಸ್ತು ಸಾಗಣೆ ಮಾಡುತ್ತಿರುವವರು ಅರೆಸ್ಟ್!
ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಸನ್ ಸಾಧಿಕ್ ಯಾನೆ ಬೇಡ್ ಸಾಧಿಕ್(35) ಬಂಧಿತ ಆರೋಪಿ.ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿ ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಹಸನ್ ಸಾಧಿಕ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಒಟ್ಟು 50 ಗ್ರಾಂ ತೂಕದ ರೂ. 2,50,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ 800 ಕಾರು, ಮೊಬೈಲ್ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
ಉಪ್ಪುಂದ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಕುಸಿದು ಬಿದ್ದು ಮೀನುಗಾರ ಮೃತಪಟ್ಟ ಘಟನೆ ಆ. 19ರಂದು ಕಿರಿಮಂಜೇಶ್ವರದಲ್ಲಿ ಸಂಭವಿಸಿದೆ. ತಾರಾಪತಿ ಪಾಳ್ಯದವರ ತೊಪ್ಲು ಮಯ್ಯಾಳನ ಮನೆ ಕುಮಾರ್ (44) ಮೃತಪಟ್ಟವರು.
ಆ. 19ರಂದು ಬೆಳಗ್ಗೆ ಕಿರಿಮಂಜೇಶ್ವರ ಬಳಿ ಅರಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಬಲೆಯನ್ನು ಎಳೆಯುತ್ತಿರುವಾಗ ದೋಣಿಯೊಳಗೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು ಚಿಕಿತ್ಸೆಯ ಬಗ್ಗೆ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಕುಮಾರ್ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಸಿಕ್ಕಿಬಿದ್ದ ಇಬ್ಬರು ಗೋ ಕಳ್ಳರು.!
ದನ ಕಳ್ಳತನ ಮಾಡುತ್ತಿದ್ದ ಇಬ್ಬರು ದನ ಕಳ್ಳರನ್ನು ಪೊಲೀಸರು ಬಂಧಿಸಿದ ಘಟನೆ ಬಜಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲದ ಇರ್ಫಾನ್ (30) ಮತ್ತು ಬಂಟ್ವಾಳದ ಮೊಹಮ್ಮದ್ ಆರಿಫ್ (32) ಎಂದು ಗುರುತಿಸಲಾಗಿದೆ. ಬಜಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ದಡ್ಡಿ ಎಂಬಲ್ಲಿ ಆ.14ರಂದು ರಾತ್ರಿ ಮೂರು ದನಗಳ ಕಳವಾಗಿದ್ದು, ಇದರ ವಿರುದ್ಧ ಗೋಹತ್ಯಾ ನಿಷೇಧ ಕಾಯ್ದೆಯಲ್ಲಿ ದಾಖಲಾದ ದೂರಿನಂತೆ ಬಜಪೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ದನಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.