ಅಪ್ಪ ಮಗನ ಜಗಳ – ಕೊಲೆಯಲ್ಲಿ ಅಂತ್ಯ!
– ಕುಲ್ಲಕ ವಿಚಾರಕ್ಕೆ ಅಪ್ಪ ಮಗನಿಗೆ ಗಲಾಟೆ
ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ
ಮೂಡುಬಿದಿರೆ: ಅಂತರ್ ಜಿಲ್ಲಾ ಬೈಕ್ ಕಳ್ಳರ ಸೆರೆ
NAMMUR EXPRESS NEWS
ಬೆಳ್ತಂಗಡಿ: ಕುಲ್ಲಕ ವಿಚಾರಕ್ಕೆ ಅಪ್ಪ ಮಗನಿಗೆ ನಡೆದ ಜಗಳದಿಂದ ಮಗ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಅ. 29 ರಂದು ಭಾನುವಾರ ರಾತ್ರಿ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್ (30) ಎಂದು ತಿಳಿದುಬಂದಿದೆ ಆರೋಪಿ ತಂದೆ ಕೃಷ್ಣಯ್ಯ ಆಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ ಅ.29 ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರಿ(75) ಮಲಗಿದ್ದ ಸಂದರ್ಭ ಮಗ ಜಗದೀಶ್ ಆಚಾರಿ(31) ನಡುವೆ ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ತಂದೆ ಹಾಗೂ ಮಗನ ನಡುವೆ ಮಾತಿನ ಚಕಮಕಿ ನಡೆದಿದ್ದು, ಆ ಬಳಿಕ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ.
ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದು, ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಕೋಪಗೊಂಡ ಅಪ್ಪ ಕೃಷ್ಣಯ್ಯ ತನ್ನ ಕಪಾಟಿನಲ್ಲಿ ಇರಿಸಿದ್ದ ಚೂರಿಯಿಂದ ಮಗನ ಕುತ್ತಿಗೆಗೆ ಇರಿದಿದ್ದಾನೆ. ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ತಂದೆ ಇರಿದಿದ್ದು, ಇರಿತಕ್ಕೆ ಒಳಗಾಗಿ ಕುಸಿದು ಬಿದ್ದ ಜಗದೀಶ್ ಅನ್ನು ತಕ್ಷಣವೇ ಮನೆಯವರು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಹೆಚ್ಚಿನ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಈ ಸಂದರ್ಭ ಜಗದೀಶ್ ಆಚಾರಿ ಮೃತಪಟ್ಟಿದ್ದಾರೆ. ಇನ್ನು ಮಗನನ್ನು ಕೊಲೆ ಮಾಡಿದ ತಂದೆ ಕೃಷ್ಣಯ್ಯ ಅಚಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ
ಉಳ್ಳಾಲ: ನೇತ್ರವತಿ ನದಿಗೆ ಹಾರಿ ಆತ್ಮಹತ್ಯೆ ಯುವಕನನ್ನು ಚಿಕ್ಕಮಗಳೂರು ಮೂಲದ ಪ್ರಸನ್ನ (37) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನ ಮುಗುಳಬಳ್ಳಿ ಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರ ಆತ್ಮಹತ್ಯೆಯಿಂದ ಮತ್ತೆ ಆತಂಕ ಮೂಡಿಸಿದೆ. ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.
ಮೂಡುಬಿದಿರೆ: ಅಂತರ್ ಜಿಲ್ಲಾ ಬೈಕ್ ಕಳ್ಳರ ಸೆರೆ!
ಮೂಡುಬಿದಿರೆ: ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸರ ತಂಡ ಬಂಧಿಸಿದೆ. ತುಮಕೂರು ಜಿಲ್ಲೆಯ ಆಕಾಶ್ ಹಾಗೂ ವೀರೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.ಆರೋಪಿಗಳಿಂದ ಕಳವು ಮಾಡಿದ 2 ಬೈಕುಗಳು ಸೇರಿ ಒಟ್ಟು 1.80 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಹಾವೀರ ಕಾಲೇಜಿನ ಎದುರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ನಿಲ್ಲಿಸಲು ಹೇಳಿದಾಗ ನಿಲ್ಲಿಸದೇ ಮರಳಿ ಹೋಗುವ ಯತ್ನದ ವೇಳೆ ಪೊಲೀಸ್ ನಿರೀಕ್ಷಕ ಸಂದೇಶ್ ಹಾಗೂ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆಗ ಮುರುಡೇಶ್ವರ ಮತ್ತು ಜೈನ್ ಪಿ.ಯು. ಕಾಲೇಜಿನ ಎದುರು ನಿಲ್ಲಿಸಿದ ಮೋಟಾರು ಬೈಕ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂತು. ಈ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಇವರ ಮಾರ್ಗದರ್ಶನದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೊಯಲ್, ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ನಿರ್ದೇಶನದಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.