Categories
ಕರಾವಳಿ

ಉಡುಪಿ: ಮನೆಗೆ ನುಗ್ಗಿ ಮಗು ಕಳ್ಳತನಗೈಯ್ಯಲು ಸ್ಕೆಚ್ ಹಾಕಿದ ಬುರ್ಖಾಧಾರಿ ಮಹಿಳೆಯರು

ಕರಾವಳಿ ಟಾಪ್ ನ್ಯೂಸ್

ಉಡುಪಿ: ಮನೆಗೆ ನುಗ್ಗಿ ಮಗು ಕಳ್ಳತನಗೈಯ್ಯಲು ಸ್ಕೆಚ್ ಹಾಕಿದ ಬುರ್ಖಾಧಾರಿ ಮಹಿಳೆಯರು

– ಉಡುಪಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಮೃತ್ಯು!
– ಕಾರ್ಕಳ: ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು

NAMMUR EXPRESS NEWS
ಉಡುಪಿ: ಶೌಚಾಲಯಕ್ಕೆ ಹೋಗಬೇಕೆಂದು ಕೇಳಿ ಮನೆಯೊಳಗೆ ನುಗ್ಗಿದ ಅಪರಿಚಿತ ಬುರ್ಖಾಧಾರಿ ಮಹಿಳೆಯೊಬ್ಬರು ಮಗುವಿನ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಬೆಳಪು ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ನಡೆದಿದೆ.
ಮಗುವಿನ ತಾಯಿಯ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತವೊಂದು ತಪ್ಪಿದೆ. ತಾಯಿ ಮಗುವನ್ನು ಬಚಾವ್ ಮಾಡಲು ಓಡಿದಾಗ ಅವರಿಗೆ ಚೂರಿ ಇರಿದು ಮಹಿಳೆಯರು ಎಸ್ಕೇಪ್ ಆಗಿದ್ದಾರೆ. ಮೇ. 16 ಮಧ್ಯಾಹ್ನ ಈ ಘಟನೆ ನಡೆದಿದ್ದು ಉಡುಪಿಯ ಜನತೆ ಘಟನೆಯಿಂದ ಆತಂಕಕ್ಕೊಳಗಾಗಿದ್ದಾರೆ.
ಮೊಹಮ್ಮದ್ ಅಲಿ ಎಂಬವರ ಮನೆಗೆ ಬುರ್ಖಾಧಾರಿ ಮಹಿಳೆಯರು ಟಾಯ್ಲೆಟ್ ಗೆ ಹೋಗಬೇಕು ಎಂದು ಕೇಳಿ ಮನೆಯೊಳಗೆ ನುಗ್ಗಿ ತೊಟ್ಟಿಲಲ್ಲಿದ್ದ ಮಗುವನ್ನು ಎತ್ತಿಕೊಂಡು ಹೋಗಲು ಯತ್ನಿಸಿದ್ದಾರೆ.‌ ಆಗ ಮಗುವಿನ ತಾಯಿ ತಾಬುರಿಸ್ ತಡೆದು ಬೊಬ್ಬೆ ಇಟ್ಟಿದ್ದಾರೆ.
ಆಗ ಚೂರಿ ಇರಿದು ಮಹಿಳೆಯರು ಪರಾರಿಯಾಗಿದ್ದಾರೆ. ಅನುಮಾನಸ್ಪದ ರೀತಿಯಲ್ಲಿ ನಡೆದಾಡುವ ಈ ಮಹಿಳೆಯರು ಕಂಡುಬಂದಲ್ಲಿ ತಕ್ಷಣ ಶಿರ್ವ ಠಾಣೆ 9480805450ಗೆ ತಿಳಿಸಲು ಮನವಿ ಮಾಡಲಾಗಿದೆ.

– ಉಡುಪಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಮೃತ್ಯು!

ಉಡುಪಿ: ನಗರದ ಸಮೀಪ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ. 16 ರಾತ್ರಿ ವೇಳೆ ಕೊಡಂಕೂರು ಗಣೇಶ್ ಮಾರ್ಬಲ್ ಬಳಿ ರಾಷ್ಟೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ರೋಯ್ ಡೈಲನ್ ಡಾಯಸ್ ಎಂದು ತಿಳಿಯಲಾಗಿದೆ.
ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ರೋಯ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಪಘಾತ ಉಂಟು ಮಾಡಿದ ಕಾರಿನ ಚಾಲಕನು ಕಾರನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

– ಕಾರ್ಕಳ: ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿರುವ ಘಟನೆ ಮುಂಡ್ಕೂರು ಗ್ರಾಮದ ದಡ್ಡು ಎಂಬಲ್ಲಿ ಸಂಭವಿಸಿದೆ.
ಶ್ರೀಮತಿ ಎಂಬವರ ಮನೆಯ ಕಿಟಿಕಿಯ ಮೂಲಕ ಮನೆಯ ಹಿಂದಿನ ಬಾಗಿಲಿನ ಚಿಲಕವನ್ನು ತೆರೆದು ಒಳಪ್ರವೇಶಿಸಿದ ಕಳ್ಳರು, ಕಪಾಟಿನಲ್ಲಿದ್ದ ಒಟ್ಟು 92 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.