Categories
ಕರಾವಳಿ

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ, ಓರ್ವ ವಶಕ್ಕೆ!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ, ಓರ್ವ ವಶಕ್ಕೆ!

– ಧರ್ಮಸ್ಥಳದಲ್ಲಿ ಹೃದಯಾಘಾತಕ್ಕೆ ಬಾಲಕ ಬಲಿ
– ಧರ್ಮಸ್ಥಳ: ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ!

NAMMUR EXPRESS NEWS
ಉಪ್ಪಿನಂಗಡಿ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಜಯಂತ್ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

– ಧರ್ಮಸ್ಥಳದಲ್ಲಿ ಹೃದಯಾಘಾತಕ್ಕೆ ಬಾಲಕ ಬಲಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನದಲ್ಲಿ ದುಃಖದ ಘಟನೆ ನಡೆದಿದೆ. ಹೌದು 16 ವರ್ಷದ ಬಾಲಕ ಪ್ರಥಮ್, ಆಟವಾಡುತ್ತಿರುವ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅವನು ಗೋವಿಂದ ಗೌಡರ ಪುತ್ರನೆಂದು ಗುರುತಿಸಲಾಗಿದೆ.
ಮೇ. 5ರಂದು ಮಧ್ಯಾಹ್ನದ ವೇಳೆಗೆ ಆಟವಾಡುತ್ತಿರುವಾಗ ಪ್ರಥಮ್‌ಗೆ ತೀವ್ರ ಎದೆನೋವು ಸಂಭವಿಸಿದ್ದು, ತಕ್ಷಣವೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆ ಸೇರುವಾಗಲೇ ಅವನು ಮೃತಪಟ್ಟಿರುವುದು ವೈದ್ಯರಿಂದ ದೃಢಪಟ್ಟಿದೆ.
ಪರೀಕ್ಷೆಗಾಗಿ ಪ್ರಥಮ್‌ನ ಶವವನ್ನು ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕಳಿಸಲಾಗಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಾಗಿದೆ.

– ಧರ್ಮಸ್ಥಳ: ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ!

ಧರ್ಮಸ್ಥಳ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.
ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ.2 ರಂದು ಆಂಧ್ರಪ್ರದೇಶದ ನೆಲ್ಲೂರುನಿಂದ ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ.3ರಂದು ಸಂಜೆ 5 ಘಂಟೆಗೆ ಧರ್ಮಸ್ಥಳಕ್ಕೆ ತಲುಪಿರುತ್ತಾರೆ. ದೇವರ ದರ್ಶನಕ್ಕೆ ಹೋಗುವ ಮೊದಲು OD ಅವರು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಾಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೇಕ್ಲೆಸ ನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡು ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿ ಬ್ಯಾಗಿನ ಜಿಪ್ ತೆರೆದಿದ್ದು. ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್‌ ನ ಒಳಗಡೇ ಪ್ಲಾಸ್ಟಿಕ್ ಬಾಕ್ಸಲ್ಲಿ ಇಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.