Categories
ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ

ಟಾಪ್ 3 ನ್ಯೂಸ್ ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ

* ಕುಂದಾಪುರ: ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿಗೆ ಡಾಕ್ಟರೇಟ್

* ಸುಳ್ಯ: ಆಗಸ್ಟ್ 3ರಂದು ಗೌಡರ ಸೇವಾ ಸಂಘದಿಂದ ಆಟಿ ಆಚರಣೆ

ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕವಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ, ನೆಲ್ಯಾಡಿಯ ಉಷಾ ಅಂಚನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯೂ ಹಾಗೂ ವಿಧಾನಪರಿಷತ್ತಿನ ಸದಸ್ಯರಾಗಿರುವ ಮಂಜುನಾಥ ಭಂಡಾರಿ ಅವರ ಆದೇಶದ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆಯಾದ ಸೌಮ್ಯ ರೆಡ್ಡಿ ಅವರ ಶಿಫಾರಸಿನಂತೆ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಅಲ್ಕಾ ಲಂಬ ಅವರು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ. ಕುಂಡಡ್ಕ ನಿವಾಸಿಯಾದ ಉಷಾ ಅಂಚನ್ ಅವರು ಸುಮಾರು ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಸಹಕಾರಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.‌ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿರುತ್ತಾರೆ.

ಕುಂದಾಪುರ: ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿಗೆ ಡಾಕ್ಟರೇಟ್

ಕುಂದಾಪುರ: ಕ್ರೀಡಾ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ, ಕುಂದಾಪುರ ಮೂಲದ ಸತೀಶ್ ಖಾರ್ವಿ ಅವರಿಗೆ ತಮಿಳುನಾಡಿನ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ಅಕಾಡೆಮಿಯು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದ್ದಾರೆ.‌ ಪವರ್ ಲಿಫ್ಟರ್ ಆಗಿರುವ ಸತೀಶ್ ಖಾರ್ವಿ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪದಕಗಳನ್ನು ಪಡೆದಿದ್ದು, ಕ್ರೀಡಾ ಕ್ಷೇತ್ರದಲ್ಲಿನ ಇವರ ಸಾಧನೆಯನ್ನು ಗುರುತಿಸಿ, ಈ ಗೌರವವನ್ನು ಸಲ್ಲಿಸಲಾಗಿದೆ.

ಸುಳ್ಯ: ಆಗಸ್ಟ್ 3ರಂದು ಗೌಡರ ಸೇವಾ ಸಂಘದಿಂದ ಆಟಿ ಆಚರಣೆ

ಸುಳ್ಯ: ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಆಗಸ್ಟ್ ಮೂರರಂದು ಸುಳ್ಯದ ಕೋಡಿಯಾಲ ಬೈಲಿನ ಗೌಡ ಸಮುದಾಯ ಭವನದಲ್ಲಿ, ಹದಿಮೂರನೇ ವರ್ಷದ ಆಟಿ ಆಚರಣೆಯನ್ನು ನಡೆಸಲು ನಿರ್ಧರಿಸಿರುವುದಾಗಿ ನಗರ ಸಮಿತಿಯ ಅಧ್ಯಕ್ಷರಾದ ರಾಕೇಶ್ ಕುಂಟಿಕಾನ ಅವರು ತಿಳಿಸಿದ್ದಾರೆ. ಅಂದು ಮಕ್ಕಳು ಮಹಿಳೆಯರು ಹಾಗೂ ಪುರುಷರಿಗೆ ವಯೋಮಾನಕ್ಕೆ ಅನುಗುಣವಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು, ಕಾರ್ಯಕ್ರಮವನ್ನು ವೈದ್ಯರಾದ ಜನಾರ್ಧನ ಗೌಡ ಸೂಂತೋಡು, ಶ್ರೀಮತಿ ವಸಂತಿ ದಂಪತಿಗಳು ಉದ್ಘಾಟಿಸಲಿದ್ದಾರೆ. ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ, ನ್ಯಾಯವಾದಿ ರಾಮಕೃಷ್ಣ ಅಮೈ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.