ಕ್ರೈಸ್ಟ್ ಕಿಂಗ್ : ಈಜು ಸ್ಪರ್ಧೆಯಲ್ಲಿ ಶೈನಿ ಡಿಸೋಜ ರಾಜ್ಯಮಟ್ಟಕ್ಕೆ ಆಯ್ಕೆ
* ಶೈನಿ ಡಿಸೋಜ ಬೆಳ್ಳಿ, ಎರಡು ಕಂಚು ಪದಕಗಳೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ
* ಶಾನ್ ಡಿಸೋಜ, ಸಿಯಾ ಜೋನ್ನಾ ತಲಾ ಕಂಚು ಪದಕ ವಿಜೇತರು
NAMMUR EXPRESS NEWS
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಜಿಲ್ಲಾ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಆಶ್ರಯದಲ್ಲಿ ಮಣಿಪಾಲದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ 14/17 ವರ್ಷದ ವಯೋಮಿತಿಯ ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶೈನಿ ಡಿಸೋಜ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಅವರು 200 ಮೀ. ಫ್ರೀಸ್ಟೈಲ್‌ನಲ್ಲಿ ಬೆಳ್ಳಿ ಪದಕ, 100 ಮೀ. ಫ್ರೀಸ್ಟೈಲ್ ಮತ್ತು 100 ಮೀ. ಬ್ಯಾಕ್‌ಸ್ಟ್ರೋಕ್‌ನಲ್ಲಿ ಕಂಚಿನ ಪದಕಗಳನ್ನು ಗೆದ್ದು ರಾಜ್ಯಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ. ಇದೇ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಶಾನ್ ಡಿಸೋಜ 50 ಮೀ. ಫ್ರೀಸ್ಟೈಲ್ ಮತ್ತು 50 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಆರನೇ ತರಗತಿಯ ಸಿಯಾ ಜೋನ್ನಾ ಅಂಚನ್ 50 ಮೀ. ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.
