Categories
ಕಾರ್ಕಳ

ಚೆಸ್ ಪಂದ್ಯದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ಆಯ್ಕೆ

ಚೆಸ್ ಪಂದ್ಯದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ಆಯ್ಕೆ 
* ತಾಲೂಕು ಮಟ್ಟದಲ್ಲಿ ಪ್ರಶಸ್ತಿ ಜಯಿಸಿದ ವಿದ್ಯಾರ್ಥಿಗಳು
* ಜಿಲ್ಲಾಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದ ಕ್ರೈಸ್ಟ್ ಕಿಂಗ್ ತಂಡ

NAMMUR EXPRESS NEWS
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಕರ್ನಾಟಕ ಸರ್ಕಾರ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಆಶ್ರಯದಲ್ಲಿ ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದಿಂದ ಎಂಟನೇ ತರಗತಿಯ ಮೌಲ್ಯ, ಪ್ರೌಢಶಾಲಾ ವಿಭಾಗದಿಂದ ಒಂಬತ್ತನೇ ತರಗತಿಯ ವರುಣ್ ಕಾಮತ್ ಮತ್ತು ಹತ್ತನೇ ತರಗತಿಯ ಸೋಹನ್ ಭಂಡಾರಿ ಹಾಗೂ ಅಕ್ಷಿತಾ ತಾಲೂಕು ಮಟ್ಟದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗಳಿಸಿ ಜಿಲ್ಲಾಮಟ್ಟದ ಸ್ಪರ್ಧೆಗೆ ಅರ್ಹರಾದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.