Categories
ಕಾರ್ಕಳ

ಕಾರ್ಕಳದಲ್ಲಿ ಉಚಿತ ಹೃದ್ರೋಗ ತಪಾಸಣೆ ಮತ್ತು ರಕ್ತದಾನ ಶಿಬಿರ

ಕಾರ್ಕಳದಲ್ಲಿ ಉಚಿತ ಹೃದ್ರೋಗ ತಪಾಸಣೆ ಮತ್ತು ರಕ್ತದಾನ ಶಿಬಿರ

ಕಾರ್ಕಳ: ಲಯನ್ಸ್ ಕ್ಲಬ್ ಕಾರ್ಕಳ ಸಿಟಿ, ರೋಟರಿ ಕ್ಲಬ್ ಕಾರ್ಕಳ, ಟೀಮ್ ಕಲ್ಜಿಗ ಮತ್ತು ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

ಈ ಶಿಬಿರವು ಸೆಪ್ಟೆಂಬರ್ 14, ಆದಿತ್ಯವಾರ ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಜರುಗಲಿದೆ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಹೃದಯ ತಪಾಸಣೆ ಸೇರಿದಂತೆ ಅಗತ್ಯವಾದ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ನೀಡಲಾಗುವುದು.

ಅದೇ ಸಮಯದಲ್ಲಿ ಬೃಹತ್ ರಕ್ತದಾನ ಶಿಬಿರವೂ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ ಶಿಬಿರದ ಯಶಸ್ಸಿಗೆ ಕೈಜೋಡಿಸುವಂತೆ ಸಂಘಟಕರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ: 7676401958, 9980255418.  

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.