ಕಾರ್ಕಳಕ್ಕೆ ಇಂದು ರಾಜ್ಯಪಾಲರ ಆಗಮನ
– ಆನೆಕೆರೆ ಚತುರ್ಮುಖ ಕೆರೆ ಬಸದಿಯ ಧಾಮ ಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಪನೆ
– ಡಾ.ವೀರೇಂದ್ರ ಹೆಗ್ಗಡೆ ಸೇರಿ ಅನೇಕ ಗಣ್ಯರ ಉಪಸ್ಥಿತಿ
NAMMUR EXPRESS NEWS
ಕಾರ್ಕಳ : ಆನೆಕೆರೆ ಚತುರ್ಮುಖ ಕೆರೆ ಬಸದಿಯ ಧಾಮ ಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಪನೆ ಮತ್ತು ಮೇಗಿನ ನೆಲೆಯ ಭಗವಾನ್ 1008 ಶ್ರೀ ಪಾಶಶ್ವನಾಥ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವ ಜ.18ರಿಂದ 22ರವರೆಗೆ ನಡೆಯಲಿದ್ದು, ಪ್ರತಿದಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜ.18 ರಂದು ಸಂಜೆ 3.30ಕ್ಕೆ ಉದ್ಘಾಟನೆ ನೆರವೇರಲಿದ್ದು, ಪರಮಪೂಜ್ಯ 108 ಮುನಿಶ್ರೀ ಅಮೋಘಕೀರ್ತಿ ಮಹಾರಾಜ್, 108 ಮುನಿಶ್ರೀ ಅಮರಕೀರ್ತಿ ಮಹಾರಾಜ್, ಕಾರ್ಕಳ ದಾನಶಾಲೆಜೈನಮಠದಸ್ವಸ್ತಿಶ್ರೀಲಲಿತಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಹೊಂಬುಜ ಜೈನಮಠ ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರ ಉಪಸ್ಥಿತಿಯಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಯಾರ ಉಪಸ್ಥಿತಿ ಇರಲಿದೆ :
ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ವಿ.ಸುನೀಲ್ ಕುಮಾರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಸಚಿವ ಡಿ.ಸುಧಾಕರ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಗೌರವ ಸಲಹೆಗಾರ ಎಂ.ಕೆ. ವಿಜಯ ಕುಮಾರ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಕಾರ್ಯಾಧ್ಯಕ್ಷ ಮಹಾವೀರ ಹೆಗ್ಡೆ ಭಾಗವಹಿಸಲಿದ್ದಾರೆ