ಹೆಬ್ರಿ: ಭಿತ್ತಿಪತ್ರ ತಯಾರಿಕಾ ಸ್ಪರ್ಧೆಯಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ತೃತೀಯ ಬಹುಮಾನ
ಹೆಬ್ರಿ: ಪದವಿ ಪೂರ್ವ ಕಾಲೇಜು ಸಂಖ್ಯಾಶಾಸ್ತ್ರ ವಿಭಾಗದ ವತಿಯಿಂದ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಿತ್ತಿಪತ್ರ ತಯಾರಿಕೆ ಸ್ಪರ್ಧೆಯಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಸುಹಮೈರ್ ನವಾಝ್ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಯನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.