Categories
ಕಾರ್ಕಳ

ಹಿಂದೂ ಯುವತಿ ಅತ್ಯಾಚಾರ ಆರೋಪ: ಕಾರ್ಕಳ ಪ್ರಕ್ಷುಬ್ಧ!

ಹಿಂದೂ ಯುವತಿ ಅತ್ಯಾಚಾರ ಆರೋಪ: ಕಾರ್ಕಳ ಪ್ರಕ್ಷುಬ್ಧ!
– ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ
– ಕಾರನ್ನು ಅಡ್ಡಗಟ್ಟಿ ಹಿಡಿದ ಹಿಂದೂ ಕಾರ್ಯಕರ್ತರು
– ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ:ಗಾಂಜಾ ನೀಡಿ ಅತ್ಯಾಚಾರ ಆರೋಪ

NAMMUR EXPRESS NEWS
ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳದ ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಕಾರ್ಕಳ ಪ್ರಕ್ಷುಬ್ಧಗೊಂಡಿದೆ.
ಸಂತ್ರಸ್ತೆ ಯುವತಿ ಕುಕ್ಕುಂದೂರಿನ ಮನೆ ಪಕ್ಕದ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಆರಂಭದಲ್ಲಿ ಯುವತಿಗೆ ಮದ್ಯ ಹಾಗೂ ಇತರ ಮಾದಕ ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ಬಳಿಕ ಮತ್ತಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ.
ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಅವರು ಘಟನೆಯ್ು ಖಂಡಿಸಿದ್ದು ತಕ್ಷಣ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೋವಿ ಸಮುದಾಯದವರು ಕೂಡ ಘಟನೆಯನ್ನು ಖಂಡಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪರಿಚಯದವನಿಂದಲೇ ಕೃತ್ಯ?

ಆರೋಪಿಗಳ ಪೈಕಿ ಓರ್ವನು ಯುವತಿಗೆ ಪರಿಚಿತನಾಗಿದ್ದಾನೆ ಎಂದು ತಿಳಿದುಬಂದಿದೆ. ಈತನೇ ಈಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ಮತ್ತಿಬ್ಬರನ್ನು ಕರೆಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಯುವತಿಯು ಜೇನುಕೃಷಿ ಮಾಡಿಕೊಂಡಿರುತ್ತಿದ್ದಳು. ಈಕೆಯ ಕುಟುಂಬ ಕೆಲವು ವರ್ಷಗಳ ಹಿಂದೆಯೇ ಕಾರ್ಕಳಕ್ಕೆ ಬಂದು ನೆಲೆಸಿತ್ತು ಎಂದು ತಿಳಿದುಬಂದಿದೆ.
ಶುಕ್ರವಾರ ಸಂಜೆ 7 ಗಂಟೆಯ ವೇಳೆ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಪ್ರಕರಣ ಸಂಬಂಧ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

ನಡೆದಿದ್ದು ಏನು?

ಅಲ್ತಾಪ್ ಎಂಬಾತ ಕಾರಿನಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಹೋಗಿದ್ದ. ಸಂಜೆಯಾಗುತ್ತಲೇ ಯುವತಿಯನ್ನ ವಾಪಸ್ ಕರೆ ತಂದಿದ್ದ, ವಿಷಯ ತಿಳಿಯುತ್ತಿದ್ದಂತೆ ಕಾರು ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಇನ್ನು ಕಾರಿನಲ್ಲಿದ್ದ ಯುವತಿ ನಶೆಯಲ್ಲಿದ್ದುದ್ದನ್ನು ಕಂಡ ಹಿಂದೂ ಕಾರ್ಯಕರ್ತರು ಗರಂ ಆಗಿದ್ದಾರೆ.
ಘಟನೆ ಬೆನ್ನಲ್ಲೇ ಇಡೀ ಕಾರ್ಕಳದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಬಂದ ಪೊಲೀಸರು ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಇನ್ನು ಯುವತಿ ಕಾರ್ಕಳದಲ್ಲಿ ಉದ್ಯೋಗವೊಂದರಲ್ಲಿ ಇದ್ದು, ಅಲ್ತಾಫ್ ಗೆ ಈಗಾಗಲೇ ಮದುವೆಯಾಗಿ ಮಕ್ಕಳಿರುವುದಾಗಿ ಆರೋಪ ಕಳಿಬಂದಿದೆ. ಕಾರ್ಕಳ ನಗ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಇದೀಗ ಇದೇ ಮಾದರಿ ಘಟನೆ ಕರಾವಳಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.