Categories
ಕಾರ್ಕಳ

ಚೆಸ್ ಅಲ್ಲಿ ರಾಷ್ಟ್ರ ಮಟ್ಟಕ್ಕೆ ಕಾರ್ಕಳದ ಹುಡುಗಿ!

ಚೆಸ್ ಅಲ್ಲಿ ರಾಷ್ಟ್ರ ಮಟ್ಟಕ್ಕೆ ಕಾರ್ಕಳದ ಹುಡುಗಿ!
– ಸತತವಾಗಿ 4ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಶಾನ್ವಿ ಬಲ್ಲಾಳ್
– ಕ್ರೈಸ್ಟ್ ಕಿಂಗ್ ಪಿಯು ಕಾಲೇಜಿನ ಪ್ರತಿಭೆಗೆ ಸಲಾಂ
– ಶಾನ್ವಿ, ಅನನ್ಯ ಆಟದಿಂದ ಉಡುಪಿ ತಂಡ ವಿನ್ನರ್

NAMMUR EXPRESS NEWS
ಕಾರ್ಕಳ: ಚೆಸ್ ಅಲ್ಲಿ ರಾಷ್ಟ್ರ ಮಟ್ಟಕ್ಕೆ ಕಾರ್ಕಳದ ಹುಡುಗಿ ಶಾನ್ವಿ ಬಲ್ಲಾಳ್ ಸತತವಾಗಿ 4ನೇ ಬಾರಿಗೆ ಆಯ್ಕೆಯಾಗುವ ಮೂಲಕ ಕಾರ್ಕಳದ ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಹೆಚ್ಚಿಸಿದ್ದಾಳೆ. ರಾಷ್ಟ್ರ ಮಟ್ಟಕ್ಕೆ ಶಾನ್ವಿ ಬಲ್ಲಾಳ್ ಕ್ರೈಸ್ಟ್ ಕಿಂಗ್ ಪಿಯು ಕಾಲೇಜಿನ ಪ್ರತಿಭೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ), ಕರ್ನಾಟಕ ಸರ್ಕಾರ, ಬೆಂಗಳೂರು, ಆಧುನಿಕ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಚಾಮರಾಜನಗರ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶಾನ್ವಿ ಬಲ್ಲಾಳ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅನನ್ಯ ಎನ್,ಕೆ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಶಾನ್ವಿ ಬಲ್ಲಾಳ್ ಅವರನ್ನೊಳಗೊಂಡ ಉಡುಪಿ ಜಿಲ್ಲೆಗೆ ಪ್ರಥಮ ಬಹುಮಾನ ಪಡೆದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.