ಕಾರ್ಕಳ: ಹೊಟೇಲ್ ಉದ್ಯಮಿ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ
ಕಾರ್ಕಳ: ಬೈಲೂರಿನ ಹೊಟೇಲ್ ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಂದಿಲ್ಲ.
ಮೃತರು ಪತ್ನಿ, ಪುತ್ರ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಅವರು ಬೈಲೂರು-ಕೌಡೂರು ಮಾರಿಯಮ್ಮ ದೇವಾಲಯದ ನಾಯರ್‌ಬೆಟ್ಟು ಧಾರ್ಮಿಕ ಸೇವಾ ಸಮಿತಿಯ ಕಾರ್ಯದರ್ಶಿಯಾಗಿದ್ದು, ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.