ಕಾರ್ಕಳ: ಕುಂಟಲ್ಪಾಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ
ಕಾರ್ಕಳ: ಕುಂಟಲಪಾಡಿ ರಸ್ತೆಯಲ್ಲಿರುವ ಒಂದು ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಅವರನ್ನು ಗುರುತಿಲ್ಲದ ವ್ಯಕ್ತಿಗಳು ಇರಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಮಂಗಳವಾರ (ಆ.26) ಬೆಳಕಿಗೆ ಬಂದು, ಮಾಹಿತಿ ದೊರಕುತ್ತಿದ್ದಂತೆಯೇ ಕಾರ್ಕಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು.
ಮೂಲಗಳ ಪ್ರಕಾರ, ಮೃತ ನವೀನ್ ಪೂಜಾರಿ ಕಾರ್ಕಳದಲ್ಲೇ ನೆಲೆಸಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಕೊಲೆಯ ಹಿಂದೆ ನಿಖರವಾದ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಪೊಲೀಸರು ಪ್ರಕರಣ ದಾಖಲಿಸಿ, ವಿವಿಧ ಕೋನಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಎಎಸ್‌ಪಿ ಡಾ. ಹರ್ಷಪ್ರಿಯಂವದ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.