Categories
ಕಾರ್ಕಳ

ಕಾರ್ಕಳ: ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ ನಿಧನ

ಕಾರ್ಕಳ: ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ ನಿಧನ

ಕಾರ್ಕಳ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ವಾಸುದೇವ ಅವರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು, ಸ್ಥಳೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ವ್ಯಕ್ತಿತ್ವವಾಗಿದ್ದರು.

ಪಾರ್ಥಿವ ಶರೀರವನ್ನು ಅಪರಾಹ್ನ 1 ಗಂಟೆಗೆ ಮಣಿಪಾಲದಿಂದ ನಿಟ್ಟೆ ಗ್ರಾಮದ ಕಲಂಬಾಡಿ ಪದವುಗೆಲ್ಲಲು ತರಲಾಗುತ್ತದೆ. ಸಂಜೆ 4 ಗಂಟೆಗೆ ಕುಟುಂಬಸ್ಥರ ಉಪಸ್ಥಿತಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ತಮ್ಮ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿರುವ ವಾಸುದೇವ ಅವರು, ಕೆಲವೇ ದಿನಗಳ ಹಿಂದೆ ಮಗನನ್ನು ಕಳೆದುಕೊಂಡ ದುಃಖದಿಂದ ಚೇತರಿಸಿಕೊಳ್ಳುವ ಮೊದಲು ಇಹಲೋಕ ತ್ಯಜಿಸಿದ್ದರಿಂದ, ಕುಟುಂಬದಲ್ಲಿ ಮತ್ತಷ್ಟು ಆಘಾತವುಂಟಾಗಿದೆ.

ಸ್ಥಳೀಯ ಗಣ್ಯರು, ನಾಗರಿಕರು ಹಾಗೂ ಜನಪ್ರತಿನಿಧಿಗಳು ಕುಟುಂಬದೊಂದಿಗೆ ದುಃಖ ಹಂಚಿಕೊಂಡು ಶೋಕವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.