ಕಾರ್ಕಳದಲ್ಲಿ ಕೊಲೆಯೋ… ಆತ್ಮಹತ್ಯೆಯೋ..?
– ಲಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!
– ಲಾರಿ ಚಾಲಕನಾಗಿದ್ದವನ ಬದುಕು ಅಂತ್ಯ
NAMMUR EXPRESS NEWS
ಕಾರ್ಕಳ: ಕಾರ್ಕಳ ಬೈಪಾಸ್ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಲಾರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೊಲೆಯೋ, ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಟ್ಯಾಂಕರ್ಗೆ ನೇಣು ಬಿಗಿದು ಲಾರಿ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಂದೂರು ಗ್ರಾ.ಪಂ. ಬಳಿಯ ಕಾಂಗ್ರೆಸ್ ಕಚೇರಿ ಮುಂಭಾಗ ನಡೆದಿದೆ. ಬೆಳಗಾಂ ಮೂಲದ ಈರಣ್ಣ (40) ಆತ್ಮಹತ್ಯೆಗೆ ಶರಣಾದ ಚಾಲಕ. ಕಳೆದ 10 ವರ್ಷಗಳಿಂದ ಕಾರ್ಕಳದಲ್ಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದ ಈರಣ್ಣ ಸೆ. 25 ರ ತಡರಾತ್ರಿ ಟ್ಯಾಂಕರ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳದಲ್ಲಿ ಆಕ್ಟಿವಾ ಮತ್ತು ಚಪ್ಪಲಿ ಪತ್ತೆಯಾಗಿದೆ. ಕಾರ್ಕಳ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಸ್ಥಳ ಪರಿಶೀಲನೆ ಮಾಡಿದ್ದು ತನಿಖೆ ಮಾಡುತ್ತಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ಗುರುವಾರ ಬೆಳಿಗ್ಗೆ ಸ್ಥಳೀಯರು ನೋಡಿ ಮಾಹಿತಿ ನೀಡಿದ್ದಾರೆ. ಮೃತನು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾನೆ.
ಮೃತನ ಸಾವಿನ ಬಗ್ಗೆ ಅನೇಕ ಸಂಶಯ ಎದುರಾಗಿದೆ.