Categories
ಕಾರ್ಕಳ

ನಮ್ಮೂರ್ ಎಕ್ಸ್‌ಪ್ರೆಸ್ ವಿಡಿಯೋ ವರದಿ ಫಲಶ್ರುತಿ – ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಪ್ರಾರಂಭ

ನಮ್ಮೂರ್ ಎಕ್ಸ್‌ಪ್ರೆಸ್ ವಿಡಿಯೋ ವರದಿ ಫಲಶ್ರುತಿ – ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಪ್ರಾರಂಭ

ಅಜೆಕಾರು: ಇತ್ತೀಚೆಗೆ ನಮ್ಮೂರ್ ಎಕ್ಸ್‌ಪ್ರೆಸ್ ಚಾನೆಲ್‌ನಲ್ಲಿ ಪ್ರಸಾರವಾದ ವಿಶೇಷ ವಿಡಿಯೋ ವರದಿ ಇದೀಗ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಸ್ಥಳೀಯ ಜನತೆಗೆ ನೆಮ್ಮದಿ ತಂದಿದೆ. ಸಾರ್ವಜನಿಕರ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೊರಹಾಕಿದ ಈ ವರದಿ ಆಧಾರದ ಮೇಲೆ ಲೋಕೋಪಯೋಗಿ ಇಲಾಖೆ ತಕ್ಷಣ ಗಮನ ಹರಿಸಿ, ಅಜೆಕಾರು ಪ್ರಮುಖ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದೆ.

ಹೊಂಡಗುಂಡಿಯಿಂದ ತುಂಬಿ ಹಾಳಾಗಿದ್ದ ಅಜೆಕಾರು ರಸ್ತೆ ಹಲವು ತಿಂಗಳುಗಳಿಂದ ವಾಹನ ಸವಾರರು ಹಾಗೂ ಸ್ಥಳೀಯರಿಗೆ ತೀವ್ರ ತೊಂದರೆ ಉಂಟುಮಾಡುತ್ತಿತ್ತು. ಮಳೆಗಾಲದಲ್ಲಿ ರಸ್ತೆ ಮತ್ತಷ್ಟು ಹಾಳಾಗಿದ್ದು, ಪ್ರತಿದಿನ ಸಂಚಾರಕ್ಕೆ ಅಸಹಾಯಕ ಪರಿಸ್ಥಿತಿ ಎದುರಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ನಮ್ಮೂರ್ ಎಕ್ಸ್‌ಪ್ರೆಸ್ ಮೂಲಕ ತಮ್ಮ ಬೇಡಿಕೆಯನ್ನು ಸಾರ್ವಜನಿಕಗೊಳಿಸಿದ್ದರು.

ವೀಡಿಯೋ ವರದಿ ಪ್ರಸಾರವಾದ ಕೆಲವೇ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಂಡಿದ್ದಾರೆ. ಇದೀಗ ರಸ್ತೆ ದುರಸ್ತಿ ಕಾರ್ಯ ಆರಂಭಗೊಂಡಿದ್ದು, ಹೊಂಡಗಳನ್ನು ತುಂಬಿಸುವುದರ ಜೊತೆಗೆ ರಸ್ತೆ ಸಮತೋಲನಗೊಳಿಸುವ ಕೆಲಸ ಜಾರಿಯಲ್ಲಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.