Categories
ಕಾರ್ಕಳ

ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ: ಕಾರ್ಕಳದಲ್ಲಿ ಯುವ ಕಾಂಗ್ರೆಸ್ ಹಣ್ಣುಹಂಪಲು ವಿತರಣೆ

ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ: ಕಾರ್ಕಳದಲ್ಲಿ ಯುವ ಕಾಂಗ್ರೆಸ್ ಹಣ್ಣುಹಂಪಲು ವಿತರಣೆ

ಕಾರ್ಕಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳವಾರ ಉತ್ಸಾಹದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿಾ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ಹಾಗೂ ಜರಿಗುಡ್ಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಭೇಟಿ ನೀಡಿ ರೋಗಿಗಳು ಮತ್ತು ವೃದ್ಧರಿಗೆ ಹಣ್ಣುಹಂಪಲು ವಿತರಿಸಿದರು. ಮಾನವೀಯ ಮೌಲ್ಯಗಳನ್ನು ಆಧಾರವನ್ನಾಗಿಟ್ಟುಕೊಂಡು ಈ ರೀತಿಯ ಸಾಮಾಜಿಕ ಸೇವೆಯ ಮೂಲಕ ಜನತೆಗೆ ಸ್ಪಂದಿಸಿದ ಯುವ ಕಾಂಗ್ರೆಸ್ ತಂಡದ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶುಭದ್ ರಾವ್ ಮಾತನಾಡಿ, “ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಹಣ್ಣುಹಂಪಲು ವಿತರಣೆಯ ಮೂಲಕ ಆಚರಿಸುವುದು ಅರ್ಥಪೂರ್ಣ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿಬಿಂಬಿಸುವ ನಡೆ. ಕಾಂಗ್ರೆಸ್ ಸಿದ್ಧಾಂತವೇ ಸರ್ವರನ್ನು ಸಮಾನವಾಗಿ ಕಾಣುವುದು. ಇಂದು ವೃದ್ಧಾಶ್ರಮ ಹಾಗೂ ಆಸ್ಪತ್ರೆಯವರೊಂದಿಗೆ ಕುಟುಂಬದ ಪ್ರೀತಿಯನ್ನು ಹಂಚಿಕೊಂಡಿರುವುದು ಸಾರ್ಥಕ” ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ಜೋಗಿ, ಗ್ಯಾರಂಟಿ ಸಮಿತಿಯ ಸದಸ್ಯರು ಸಂತೋಷ್ ದೇವಾಡಿಗ ಬೋಳ, ಡೇರಲ್, ಬಿ. ಸುದರ್ಶನ್ ಬಂಗೇರ, ಶರತ್, ದೀಪಕ್ ಶೆಟ್ಟಿ (ದೊಂಡೆರಂಗಡಿ), ಶಶಿಧರ್ ಶಾಮ ಹವಾಲ್ದಾರ್ (ಬೆಟ್ಟು), ಹಾಗೂ ಸುರಕ್ಷಾ ವೃದ್ಧಾಶ್ರಮದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಭೀರ್ ಮಿಯ್ಯಾರು ಧನ್ಯವಾದ ಅರ್ಪಿಸಿದರು. 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.