Categories
ಉಡುಪಿ ಕಾರ್ಕಳ

ಹೆಬ್ರಿ ಎಸ್.ಆರ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯಲ್ಲಿ ಪ್ರಶಸ್ತಿ

ಹೆಬ್ರಿ ಎಸ್.ಆರ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯಲ್ಲಿ ಪ್ರಶಸ್ತಿ

ಹೆಬ್ರಿ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕೆಂಪೇಗೌಡರ ಜನ್ಮದಿನಾಚರಣೆಯ ಅಂಗವಾಗಿ ಹೆಬ್ರಿ ತಾಲೂಕು ಮಟ್ಟದಲ್ಲಿ ನಡೆದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಸೆಳೆಯುವ ಸಾಧನೆ ಮೆರೆದಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಫೂರ್ತಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಹೆಮ್ಮೆ ತಂದರೆ, ಇದೇ ವಿಭಾಗದ ಸನಿಹ ತೃತೀಯ ಸ್ಥಾನ ಪಡೆದಿದ್ದಾರೆ. ಭಾಷಣ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಶಿಧರ್ ಸಮಾಧಾನಕರ ಬಹುಮಾನ ಪಡೆದು ಸಾಧನೆಮಾಡಿದ್ದಾರೆ.

ವಿದ್ಯಾರ್ಥಿಗಳ ಈ ಯಶಸ್ಸಿಗೆ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಾಧನೆ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಮಾರ್ಗದರ್ಶಕರ ಪರಿಶ್ರಮದ ಫಲವಾಗಿದೆ ಎಂಬ ಅಭಿಪ್ರಾಯವನ್ನು ಕಾಲೇಜಿನ ಪ್ರಾಂಶುಪಾಲರು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.