ಕ್ರೈಸ್ಟ್ ಕಿಂಗ್ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
– ಬಾಲಕ – ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ
– ಕ್ರೈಸ್ಟ್ ಕಿಂಗ್: ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ
NAMMUR EXPRESS NEWS
ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಅದಮಾರು, ಕಾಪು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ತಂಡ ಪ್ರತಿನಿಧಿಸಿದ್ದ ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಶ್ರಾವ್ಯ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ತಂಡ ದ್ವಿತೀಯ ಸ್ಥಾನ ಪಡೆದಿದ್ದು ತಂಡವನ್ನು ಪ್ರತಿನಿಧಿಸಿದ್ದ ದ್ವಿತೀಯ ವಿಜ್ಞಾನ ವಿಭಾಗದ ಶಶಾಂಕ್ ಕೆ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕ್ರೈಸ್ಟ್ ಕಿಂಗ್: ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ
ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸೈಂಟ್ ಮೇರಿಸ್ ಪ.ಪೂ ಕಾಲೇಜು ಶಿರ್ವ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರವೀನಾ ಕನ್ವರ್ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಸುಪ್ರಭಾ ದ್ವಿತೀಯ ಸ್ಥಾನ ಪಡೆದರೆ ಬಾಲಕರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಮೊಹಮ್ಮದ್ ರಿಫಾಝ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.








