ಬಾವಿ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು!
– ಕಾರ್ಕಳದ ಕುಕ್ಕುಂದೂರು ಅಶ್ವಥಪುರದಲ್ಲಿ ಘಟನೆ
– ಕಾರ್ಕಳ ಅಗ್ನಿ ಶಾಮಕ ದಳದ ಯಶಸ್ವಿ ಕಾರ್ಯಚರಣೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಅಶ್ವಥಪುರದಲ್ಲಿ ಬಾವಿಯ ಮಣ್ಣು ತೆಗೆಯುವ ವೇಳೆ ಮೂವರು ಕಾರ್ಮಿಕರು ಬಾವಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಗಾಯಗೊಂಡಿದ್ದ ರಾಜೇಶ್ ಅವರನ್ನು ರಕ್ಷಿಸಲು ಹೋದ ಪವನ್ ಹಾಗೂ ಗೋಪಾಲ್ ನಾಯ್ಕ ಕೂಡ ಸಂಕಷ್ಟಕ್ಕೆ ಸಿಲುಕಿದ್ದರು. ಮಾಹಿತಿ ಪಡೆದ ಕಾರ್ಕಳ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಸಾಹಸಮಯ ಕಾರ್ಯಾಚರಣೆ ನಡೆಸಿ ಮೂವರನ್ನೂ ಸುರಕ್ಷಿತವಾಗಿ ಮೇಲಕ್ಕೆತ್ತಿದೆ. ಗಾಯಾಳು ರಾಜೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ ಕಾರ್ಕಳ ಅಗ್ನಿ ಶಾಮಕ ದಳದ ಸಿಬ್ಬಂದಿ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.








