Categories
ಕೊಪ್ಪ

ಹಲ್ಲು ಕಳೆದುಕೊಂಡಿದ್ದಕ್ಕೆ ಜೀವ ಕಳೆದುಕೊಂಡ ಯುವಕ

ಹಲ್ಲು ಕಳೆದುಕೊಂಡಿದ್ದಕ್ಕೆ ಜೀವ ಕಳೆದುಕೊಂಡ ಯುವಕ

* ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡಿದ್ದ ಯುವಕ
* ಸದಾ ಆಸ್ಪತ್ರೆಗೆ ಹೋಗಿ ಜಿಗುಪ್ಸೆಗೊಂಡು ಆತ್ಮಹತ್ಯೆ

NAMMUR EXPRESS NEWS
ಕೊಪ್ಪ: ತಾಲೂಕಿನ ಭುವನಕೋಟೆ ಗ್ರಾಮದ 18 ವರ್ಷದ ವಿಘ್ನೇಶ್ ಎಂಬ ಯುವಕ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡಿದ್ದರು. ಈ ಘಟನೆಯಿಂದಾಗಿ ಮಾನಸಿಕವಾಗಿ ತೀವ್ರ ಬಳಲುತ್ತಿದ್ದ ವಿಘ್ನೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಘ್ನೇಶ್ (18) ಮೃತ ದುರ್ದೈವಿ. ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದ ವಿಘ್ನೇಶ್​ ಮೊದಲ ವರ್ಷದ ಐಟಿಐ ಓದುತ್ತಿದ್ದರು. ನಾಲ್ಕು ವರ್ಷದ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ವಿಘ್ನೇಶ್ 17 ಹಲ್ಲುಗಳನ್ನ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದಾ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಇದೀಗ, ಮನನೊಂದು ವಿಘ್ನೇಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.