- ನ.20ಕ್ಕೆ “ಕಿರಣ್ ಹೆಲ್ತ್ ಕೇರ್” ಶುಭಾರಂಭ
- ಪ್ರಸಿದ್ಧ ವೈದ್ಯ ಡಾ.ಗಣೇಶ ನಾಯಕ್ ಮಾಲಿಕತ್ವದ ಆಸ್ಪತ್ರೆ
ತೀರ್ಥಹಳ್ಳಿ: ಆರೋಗ್ಯ ಮತ್ತು ಚಿಕಿತ್ಸೆ ಸೇವೆಗಳಲ್ಲಿ ಕರಾವಳಿ ಮತ್ತು ಮಲೆನಾಡು ಮುಂಚೂಣಿಯಲ್ಲಿದೆ. ಈ ನಡುವೆ ಕರಾವಳಿ ಮ್ತು ಮಲೆನಾಡಿನ ಸಂಪರ್ಕ ಕೊಂಡಿಯಾಗಿರುವ ತೀರ್ಥಹಳ್ಳಿಯಲ್ಲಿ ಇದೀಗ ಕಿರಣ್ ಹೆಲ್ತ್ ಕೇರ್ ಎಂಬ ಹೈಟೆಕ್ ಆಸ್ಪತ್ರೆ ಶುಭಾರಂಭ ಮಾಡಲಿದೆ.
ದಶಕಗಳ ಕಾಲ ಆರೋಗ್ಯ ಸೇವೆಯನ್ನು ಮಲೆನಾಡಿನ ಜನತೆಗೆ ನೀಡಿರುವ ಡಾ.ಗಣೇಶ್ ನಾಯಕ್ ಮಾಲಿಕತ್ವದ ಈ ಆಸ್ಪತ್ರೆ ಅತ್ಯಾಧುನಿಕ ಹಾಗೂ ಹೈಟೆಕ್ ಸೌಲಭ್ಯ ಹೊಂದಿದೆ. ಜೊತೆಗೆ ಶಾಂತ ಪ್ರದೇಶದಲ್ಲಿದ್ದು, ನ.20ಕ್ಕೆ ಉದ್ಘಾಟನೆಗೊಳ್ಳಲಿದೆ.
ನೂತನ ಆಸ್ಪತ್ರೆಯ ಉದ್ಘಾಟಕರಾಗಿ ಡಾ.ವೆಂಕಟೇಶ್ (FMMC,Manipal) ಹಾಗೂ ಮುಖ್ಯ ಅತಿಥಿಗಳಾಗಿ ಟಿ.ವಿ.ಗಜೇಂದ್ರನಾಥ್ ಮತ್ತು ಹೇಮಲತಾ ಕೊರಣ್ಣನವರ್ ಆಗಮಿಸಲಿದ್ದಾರೆ. ತೀರ್ಥಹಳ್ಳಿಯ ಕೊಪ್ಪ ಸರ್ಕಲ್ನಿಂದ ಸರ್ಕಾರಿ ಪಿಯು ಕಾಲೇಜಿಗೆ ಹೋಗುವ ಮಾರ್ಗದಲ್ಲಿ ಆರಂಭವಾಗಿರುವ ಕಿರಣ್ ಹೆಲ್ತ್ಕೇರ್ನ ಶುಭಾರಂಭಕ್ಕೆ ಸರ್ವರನ್ನೂ ಡಾ.ಗಣೇಶ್ ನಾಯಕ್ ಹಾಗೂ ಕುಟುಂಬ ವರ್ಗ ಸ್ವಾಗತಿಸಿದೆ.
ತೀರ್ಥಹಳ್ಳಿಯಲ್ಲಿ ಈಗಾಗಲೇ ಮೇಳಿಗೆ, ಅನುರಾಧಾ, ಮಾನಸ, ಪ್ರಶಾಂತಿ ಚಿಕಿತ್ಸಾಲಯ, ಪೂಜ್ಯಪಾದ ಸೇರಿದಂತೆ ಅನೇಕ ಆಸ್ಪತ್ರೆಗಳಿವೆ. ಮಲ್ನಾಡ್ ಡಯಾಗ್ನಿಸಿಸ್ ಸೆಂಟರ್ ಕೂಡ ಇದೆ. ಉತ್ತಮ ಸೇವೆ ನೀಡುವ ಸರ್ಕಾರಿ ಆಸ್ಪತ್ರೆಯೂ ಇದೆ. ಈ ನಡುವೆ ಕಿರಣ್ ಹೆಲ್ತ್ ಕೇರ್ ಆರೋಗ್ಯ ಸೇವೆ ನೀಡಲು ಸಜ್ಜಾಗಿದೆ.