- ಇಬ್ಬರು ಅರ್ಚಕರ ಮೇಲೆ ಕೇಸ್!
- ದೇಗುಲದಲ್ಲಿ ನಡೆದ ಘಟನೆ ಬಗ್ಗೆ ಸಿಎಂ ಬೇಸರ
ಸಾಗರ: ರಾಜ್ಯದ ಪ್ರಸಿದ್ಧ ಸಿಗಂದೂರು ದೇವಸ್ಥಾನದಲ್ಲಿ ಗಲಾಟೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ದೇವಸ್ಥಾನದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಹಾಗೂ ಅವರ ಸಹೋದರ ಸುಬ್ಬಾ ಭಟ್ ವಿರುದ್ಧ ಕೇಸ್ ದಾಖಲಾಗಿದೆ. ಇವರು ದ್ಯಾಮಪ್ಪ ಜೈನ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಕಾರ್ಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 323, 324, 504 ಮತ್ತು 506ರ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಇತ್ತ ಡಿಸಿ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಖಡಕ್ ಕ್ರಮ: ಸಿಗಂದೂರಿಗೆ ಡೀಸಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಸರ್ಕಾರ ಇಬ್ಬರು ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳದಿದ್ದರೆ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಲಿದೆ. ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಸಿಎಂ ಬೇಸರ!: ಸಿಗಂದೂರಲ್ಲಿ ನಡೆದ ಘಟನೆ ಬಗ್ಗೆ ಸಿಎಂ ಶಿಕಾರಿಪುರದಲ್ಲಿ ಪ್ರತಿಕ್ರಿಯೆ ನೀಡಿದ್ದು ಇದೊಂದು ಬೇಸರದ ಘಟನೆ ಎಂದಿದ್ದಾರೆ.