- ತಿಪಟೂರ್ ರಘು, ಅಭಿರಾಮ್ ವಿಧಿವಶ
- ಹಿರಿಯ ಬಿಜೆಪಿ ನಾಯಕ ಉದಾಸಿ ಅಸ್ವಸ್ಥ
- ಮಗ ತಲೆ ಕೊಚ್ಚಿದ ತಂದೆ ಉಳಿಯಲಿಲ್ಲ..!
ಬೆಂಗಳೂರು: ಕರೋನಾ ಕನ್ನಡ ಚಲನಚಿತ್ರ ರಂಗದ ಮತ್ತಿಬ್ಬರು ನಿರ್ದೇಶಕರು ಬಲಿಯಾಗಿದ್ದಾರೆ.
ಹಿರಿಯ ನಿರ್ದೇಶಕ ತಿಪಟೂರು ರಘು (83) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರು ಉಸಿರಾಟದ ಸಮಸ್ಯೆಯಿಂದಾಗಿ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕರಾಗಿರುವ ಇವರು 1984ರಲ್ಲಿ ತೆರೆಕಂಡ ವಿಷ್ಣುವರ್ಧನ್ ಮತ್ತು ಶಂಕರನಾಗ್ ಅಭಿನಯದ ‘ಬೆಂಕಿ ಬಿರುಗಾಳಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೆ ನಾಗಕಾಳಭೈರವ, ಬೆಟ್ಟದ ಹುಲಿವೀಣೆ ಸೇರಿದಂತೆ ಅನೇಕ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ.
ಯುವ ನಿರ್ದೇಶಕ ಸಾವು!: ಕನಸಿನ ಸಿನಿಮಾ ತೆರೆಗೆ ಬರುವ ಮುನ್ನವೇ ನಿರ್ದೇಶಕ ಅಭಿರಾಮ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೆಲ ತಿಂಗಳ ಹಿಂದೆ ಅಭಿರಾಮ್ ನಿರ್ದೇಶನದ 0% ಲವ್ ಚಿತ್ರದ ನಾಯಕ ನಟ ಡಿ.ಎಸ್.ಮಂಜುನಾಥ್ ಸಹ ಸಾವನ್ನಪ್ಪಿದ್ದರು.ಸಂಯುಕ್ತ-2 ಸಿನಿಮಾದ ಮೂಲಕ ನಿರ್ಮಾಪಕರಾಗಿ ಮತ್ತು ನಟನಾಗಿ ಮಂಜುನಾಥ್ ಚಿತ್ರರಂಗಕ್ಕೆ ಬಂದಿದ್ದವರು. ನಂತರ ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾವನ್ನು ನಿರ್ಮಿಸಿ ಹೆಸರು ಮಾಡಿದರು. ಸದ್ಯ 0% ಲವ್ ಚಿತ್ರದಲ್ಲಿ ಹೀರೋ ಆಗಿ ಕೂಡಾ ನಟಿಸುತ್ತಿದ್ದರು. ಕಳೆದ ವಾರದಿಂದ ಜ್ವರ, ಕೆಮ್ಮು ಇತ್ಯಾದಿ ಅನಾರೋಗ್ಯದ ಲಕ್ಷಣಗಳಿದ್ದರೂ ಈತ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ.
ಮಾಜಿ ಸಚಿವ ಅನಾರೋಗ್ಯ! ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ.ಉದಾಸಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಕುಡಿಯಲು ಹಣ ಕೊಡದಕ್ಕೆ ಮಗ ತಂದೆಯನ್ನು ಕೊಡಲಿಯಿಂದ ಕೊಚ್ಚಿದ್ದು ಇದೀಗ ತಂದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.