ಎಣ್ಣೆ ಕುಡಿದ 13 ವರ್ಷದ ಹುಡುಗ ಆತ್ಮಹತ್ಯೆ!
* ಅಪ್ಪ ಬೈತಾರೆಂದು ಆತ್ಮಹತ್ಯೆಗೆ ಶರಣಾದ ಬಾಲಕ
* ಮದುವೆ ಮನೆಯಲ್ಲಿ ಸ್ನೇಹಿತರೊಂದಿಗೆ ಮದ್ಯ ಸೇವಿಸಿದ್ದ ಬಾಲಕ
* ಬಾಳೆಹೊನ್ನೂರು ಠಾಣಾ ವ್ಯಾಪ್ತಿ ಘಟನೆ: ಪ್ರಕರಣ ದಾಖಲು
NAMMMUR EXPRESS NEWS
ಎನ್ ಆರ್ ಪುರ:: ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ವಿಷಯ ತಿಳಿದರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದ ಗಂಗೋಜಿ ಎಂಬಲ್ಲಿ ನಡೆದಿದೆ.
ಮೃತ ಬಾಲಕ ಮೇಲ್ಪಾಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಮೇಲ್ಪಾಲ್ ಗ್ರಾಮದಲ್ಲಿ ಅದೇ ಗ್ರಾಮಸ್ಥರೊಬ್ಬರ ಮದುವೆ ಕಾರ್ಯಕ್ರಮವಿತ್ತು. ಮದುವೆಗೆ ಶರಣ್ ಸೇರಿ ಪೋಷಕರು ಹೋಗಿದ್ದರು.
ಮದುವೆ ಮನೆಯಲ್ಲಿ ಸ್ನೇಹಿತರ ಜೊತೆ ಸೇರಿ ಬಾಲಕ ಮದ್ಯ ಸೇವಿಸಿದ್ದಾನೆ. ಮದ್ಯ ಸೇವಿಸಿದ ಬಳಿಕ ಕುಡಿದಿರುವುದು ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಮನೆ ಬಳಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನ ಗಮನಿಸಿದ ಪೋಷಕರು ಕೂಡಲೇ ಆತನನ್ನ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲೇ ಬಾಲಕ ಸಾವನ್ನಪ್ಪಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.







