ಆಗುಂಬೆ ಘಾಟಿಯಲ್ಲಿ ಓಮಿನಿ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು!
– ರಸ್ತೆಯಲ್ಲಿ ಹೋಗುವಾಗ ಹುಷಾರ್
NAMMUR EXPRESS NEWS
ಆಗುಂಬೆ: ಆಗುಂಬೆ ಸೇರಿದಂತೆ ಪಶ್ಚಿಮ ಘಟ್ಟದಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮಿನಿ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅರಣ್ಯ ಇಲಾಖೆ, ಸ್ಥಳೀಯರು ಸೇರಿ ಮರ ತೆರವುಗೊಳಿಸುತ್ತಿದ್ದಾರೆ.