ವಿದ್ಯುತ್ ತಗುಲಿ ಯುವಕನ ದುರ್ಮರಣ!
– ಹೊಸನಗರದ ಹಳೂರು ಗ್ರಾಮದಲ್ಲಿ ನಡೆದ ದುರಂತ
– ಮನೆಯ ಮುಂದೆಯೇ ಯುವಕನ ಬಲಿ ಪಡೆದ ತಂತಿ
NAMMUR EXPRESS NEWS
ಹೊಸನಗರ: ಮೂತ್ರ ವಿಸರ್ಜನೆಗೆ ಹೋಗಿದ್ದಾಗ ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.ಕಾರ್ತಿಕ್ ಎಸ್ (19) ಬೆಳಗಿನಜಾವ ಮನೆ ಮುಂಭಾಗದಲ್ಲಿರುವ ಐಬಿ ಎಕ್ಸ್ ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ.
ಮನೆಯ ಮುಂದೆ ಬಿದ್ದಿದ್ದ ವಿದ್ಯುತ್ ತಂತಿ!
ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು ಹಾಗಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ. ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.