ತೀರ್ಥಹಳ್ಳಿಯ 38 ಗ್ರಾಪಂಗಳಿಗೆ ಆಡಳಿತ ಅಧಿಕಾರಿ ನೇಮಕ
– ಗ್ರಾಮ ಪಂಚಾಯತ್ ಸದಸ್ಯರ ಅವಧಿ ಮುಕ್ತಾಯ
– ಜಿಲ್ಲಾಧಿಕಾರಿಕಾರಿಗಳ ಆದೇಶ: ಏನಿದೆ ಆದೇಶ?
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳ ಸದಸ್ಯರ ಅಧಿಕಾರ ಅವಧಿ ಮುಗಿದಿದ್ದು, ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.
ಈಗಾಗಲೇ ಅನೇಕ ಗ್ರಾಮ ಪಂಚಾಯತ್ ಅಲ್ಲಿ ಆಡಳಿತ ಅವಧಿ ಮುಗಿದಿದೆ. ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 ಹಾಗೂ 42 ರಲ್ಲಿ ಉಪಬಂಧಿಸಿರುವಂತೆ ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ, ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರ ಅವಧಿಯು, ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು, 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದ್ದು ಹಾಗೂ 2020-2025 ನೇ ಸಾಲಿಗೆ ರಚಿತವಾಗಿದ್ದ ರಾಜ್ಯದ ಗ್ರಾಮ ಪಂಚಾಯಿತಿಗಳ ಅವಧಿಯು 2026ನೇ ಜನವರಿ, ಫೆಬ್ರವರಿ, ಮಾರ್ಚ್ ಹಾಗೂ ಮುಂದಿನ ತಿಂಗಳುಗಳ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳುವುದರಿಂದ, ಗ್ರಾಮ ಪಂಚಾಯಿತಿಗಳು ಮುಕ್ತಾಯಗೊಳ್ಳಲಿರುವ ದಿನಾಂಕದ ಮುಂದಿನ ದಿನಾಂಕದಿಂದ ಜಾರಿಗೆ ಬರುವಂತೆ ಆಡಳಿತಾಧಿಕಾರಿಗಳನ್ನು ನೇಮಿಸಿ ಅಧಿಸೂಚಿಸುವಂತೆ ಉಲ್ಲೇಖಿತ (1) ರ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ.
ಪ್ರಯುಕ್ತ, ಸದರಿ 2026-2031 ರ ಅವಧಿಗಾಗಿ ಚುನಾವಣೆ ನಡೆದು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಅಥವಾ ಮುಂದಿನ ಆದೇಶದವರೆಗೆ ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಪ್ರಭುಲಿಂಗ ಕವಳಿಕಟ್ಟಿ ಭಾ.ಅ.ಸೇ, ಜಿಲ್ಲಾಧಿಕಾರಿ ಅವರು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಿದೆ.
