- ತೀರ್ಥಹಳ್ಳಿಯಲ್ಲಿ ಕೊರೋನಾ ವೇಳೆ ಉಚಿತ ಸೇವೆ
- ಹತ್ತಾರು ಸಾಮಾಜಿಕ ಕೆಲಸಗಳ ಮೂಲಕ ಹೊಸ ಹೆಜ್ಜೆ
- ರಾಜ್ಯದ ಸಹಕಾರಿ ಕ್ಷೇತ್ರದಲ್ಲಿ ಹೊಸ ಪ್ರಯೋಗ
NAMMUR EXPRESS
ತೀರ್ಥಹಳ್ಳಿ: ತೀರ್ಥಹಳ್ಳಿಯ ಸಹಕಾರಿ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಲ್ಲಿ ಉತ್ತಮ ಸೇವೆ ನೀಡುತ್ತಿರುವ ದಿವ್ಯ ಚೇತನ ಸೌಹಾರ್ದ ಸಹಕಾರಿ ಸಂಸ್ಥೆ ಇದೀಗ ಮತ್ತೊಂದು ಸಾಧನೆಯ ಹೆಜ್ಜೆ ಇಟ್ಟಿದೆ. ರಾಜ್ಯದ ಸಹಕಾರಿ ಕ್ಷೇತ್ರದಲ್ಲೇ ಹೊಸ ಪ್ರಯೋಗ ಮಾಡಿ ಸಹಕಾರಿ ವತಿಯಿಂದ ಕರೋನಾ ಸಂಕಷ್ಟದ ಈ ಸಮಯದಲ್ಲಿ ಆಂಬುಲೆನ್ಸ್ ಸೇವೆ ಶುರು ಮಾಡಿದೆ.
ಸಹಕಾರಿಯು ಈಗಾಗಲೇ ಕರೋನಾ ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಸುಲಭ ಕಂತಿನ ಲ್ಯಾಪ್ಟಾಪ್ ಸಾಲದ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಈಗಾಗಲೇ ನೂರಾರು ಮಂದಿ ಷೇರುದಾರರು ಇದರ ಪ್ರಯೋಜನ ಪಡೆದಿದ್ದಾರೆ.
ಇದೀಗ ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಹಾಗೂ ಅನಾರೋಗ್ಯದ ಸಂಕಷ್ಟದಲ್ಲಿ ಇರುವವರಿಗೆ ಅಗತ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಸಂಸ್ಥೆಯ ಸದಸ್ಯರ ಹಾಗೂ ಸಾರ್ವಜನಿಕರ ಸಹಾಯಕ್ಕಾಗಿ ಅಗತ್ಯ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತ ಟಿ.ಟಿ ಆಂಬ್ಯುಲೆನ್ಸ್ ಸೇವನೆಯನ್ನು ಸ್ವಾತಂತ್ರ್ಯ ದಿನದಿಂದ ಆರಂಭಿಸಲಾಗಿದೆ. ಸಹಕಾರಿಯ ಷೇರುದಾರರಿಗೆ ವಿಶೇಷ ರಿಯಾಯಿತಿ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಸೇವೆಗಾಗಿ ಸಂಪರ್ಕಿಸಿ..
ತುರ್ತು ಅಗತ್ಯ ಉಳ್ಳವರು ಕೆಳಗಿನ ಮೊಬೈಲ್ ಸಂಖ್ಯೆ ಸಂಪರ್ಕಿಸುವ ಮೂಲಕ ಆಂಬುಲೆನ್ಸ್ ಸೇವೆಯನ್ನು ಬಳಸಿಕೊಳ್ಳಲು ಕೋರಲಾಗಿದೆ.
8277900108
6366300908
ತೀರ್ಥಹಳ್ಳಿಯ ಜನತೆಗೆ ಶೇರ್ ಮಾಡಿ.. ಕಷ್ಟದ ಸಮಯದಲ್ಲಿ ಅನುಕೂಲವಾಗಲಿ..!