ಎಲೆ ಚುಕ್ಕಿ ರೋಗ ತಡೆಗೆ ಮಹತ್ವದ ನಿರ್ಧಾರ!
– ಔಷಧಿ ಸಂಶೋಧನೆ ಈಗ ಖಾಸಗಿ ಕೈಗೆ ನೀಡಲು ತೀರ್ಮಾನ
– ಶಿವಮೊಗ್ಗದಲ್ಲಿ ಅಡಿಕೆ ಮಹಾ ಮಂಡಲ ಸಭೆ
ಓದಿ… ಮತ್ತೊಂದು ಸುದ್ದಿ…
ಡಾ.ಅನಂತಮೂರ್ತಿ ಅಧ್ಯಯನ ಕೇಂದ್ರಕ್ಕೆ ಅಸ್ತು!?
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಮಲೆನಾಡು: ಮಲೆನಾಡು ಸೇರಿ ಅಡಿಕೆ ಬೆಳೆಗಾರರನ್ನು ಆತಂಕಕ್ಕೆ ತಳ್ಳಿರುವ ಎಲೆ ಚುಕ್ಕಿ ರೋಗಕ್ಕೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಇದೀಗ ಅಡಿಕೆ ಮಹಾ ಮಂಡಲ ಮಹತ್ವದ ನಿರ್ಧಾರ ಕೈಗೊಂಡಿದೆ.
ಶಿವಮೊಗ್ಗ ಮ್ಯಾಮಕೋಸ್ ಸಭಾಂಗಣದಲ್ಲಿ ತೀರ್ಥಹಳ್ಳಿ ಕ್ಷೇತ್ರಶಾಸಕರು, ಅಡಿಕೆ ಮಹಾಮಂಡಲ ಅಧ್ಯಕ್ಷರೂ ಆದ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ಅಡಿಕೆ ಮಹಾ ಮಂಡಲ ಸಭೆ ಜರುಗಿತು. ಪ್ರಸ್ತುತ ರೈತರನ್ನು ತೀವ್ರವಾಗಿ ಬಾದಿಸುತ್ತಿರುವ ಎಲೆಚುಕ್ಕಿ ರೋಗಕ್ಕೆ ಔಷದಿಯನ್ನು ಕಂಡು ಹಿಡಿಯುವ ಅನಿವಾರ್ಯ-ಸಂದಿಗ್ಧ ಪರಿಸ್ಥಿತಿ ಇರುವುದರಿಂದ ವಿವಿಧ ಖಾಸಗಿ ಸಂಶೋಧನ ಸಂಸ್ಥೆಗಳೂ ಮುಂದಿನ ದಿನಗಳಲ್ಲಿ ಸೂಕ್ತ ಸಂಶೋಧನೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಿ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 33 ವಿವಿಧ ಅಡಿಕೆ ಬೆಳೆಗಾರರ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದು, ಶೀಘ್ರದಲ್ಲಿ ಎಲೆಚುಕ್ಕಿ ರೋಗದ ಆತಂಖದಿಂದ ರೈತರನ್ನು ಹೊರ ತರಲು ಯಾವೆಲ್ಲ ಮಾರ್ಗಗಳನ್ನು ಅನುಸರಿಸಬಹುದೋ ತ್ವರಿತಗತಿಯಲ್ಲಿ ಅನುಷ್ಠಾನಕ್ಕೆ ತಂದು ರೈತರಿಗೆ ಶಾಶ್ವತ ಪರಿಹಾರ ಕೊಡುವ ಭರವಸೆ ನೀಡಿದರು.
ಡಾ.ಅನಂತಮೂರ್ತಿ ಅಧ್ಯಯನ ಕೇಂದ್ರಕ್ಕೆ ಅಸ್ತು?
– ತೀರ್ಥಹಳ್ಳಿಯ ನಿಯೋಗ ಭೇಟಿ: ಮುಖ್ಯಮಂತ್ರಿಗಳಿಂದ ಸ್ಪಂದನೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ: ಕನ್ನಡದ ಖ್ಯಾತ ಸಾಹಿತಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಯು.ಆರ್. ಅನಂತಮೂರ್ತಿ ಅವರ ನೆನಪನ್ನು ಉಳಿಸುವ ನಿಟ್ಟಿನಲ್ಲಿ, ಅವರ ಹೆಸರಿನಲ್ಲಿ ಒಂದು ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕೆಂಬ ಒತ್ತಾಯಕ್ಕೆ ಸರ್ಕಾರದಿಂದ ಉತ್ತಮ ಸ್ಪಂದನೆ ಸಿಕ್ಕಿದೆ.
ತೀರ್ಥಹಳ್ಳಿಯ ತುಂಗಾ ವಿದ್ಯಾವರ್ಧಕ ಸಂಘದ ನೇತೃತ್ವದಲ್ಲಿ ಇತ್ತೀಚಿಗೆ ಸಿಎಂ ಬಳಿ ನಿಯೋಗ ಭೇಟಿ ನೀಡಿದ್ದು ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ಹಾಲಿ ಶಾಸಕರು ಹಾಗೂ ಮಾಜಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಎಂಎಡಿಬಿ ಅಧ್ಯಕ್ಷರಾದ ಮಂಜುನಾಥಗೌಡ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೂಡ ಇದಕ್ಕೆ ಬೆಂಬಲವನ್ನು ವ್ಯಕ್ತಪಡಿಸಿರುವುದು ಸಂತಸದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ ಅವರು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಅಧ್ಯಯನ ಕೇಂದ್ರದ ಅಗತ್ಯದ ಕುರಿತು ತಿಳಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ತುಂಗಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಎಂ.ಎನ್.ರಮೇಶ್, ಖಜಾಂಚಿಗಳಾದ ಡಾನ್ ರಾಮಣ್ಣ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳಿಂದ ಉತ್ತಮ ಸ್ಪಂದನೆ ದೊರೆತಿರುವುದು ಒಂದು ಆಶಾದಾಯಕ ಬೆಳವಣಿಗೆಯಾಗಿದೆ.
