Categories
ಮಲ್ನಾಡ್

ಬೀರೂರು: ವಿದ್ಯುತ್‌ ಲೈನ್‌ʼಗೆ ದೋಟಿ ತಗುಲಿ ರೈತ ಸಾವು..!!

ಮಲ್ನಾಡ್ ಟಾಪ್ 4 ನ್ಯೂಸ್

ಬೀರೂರು: ವಿದ್ಯುತ್‌ ಲೈನ್‌ʼಗೆ ದೋಟಿ ತಗುಲಿ ರೈತ ಸಾವು..!!
– ಶಿಕಾರಿಪುರ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ…!!
– ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ..!
– ಸೊರಬ : ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ..!!

NAMMUR EXPRESS NEWS
ಬೀರೂರು: ವಿದ್ಯುತ್‌ ಲೈನ್‌ʼಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬೀರೂರು ಕುಡ್ಲೂರು ಗ್ರಾಮದಲ್ಲಿ ನಡೆದಿದೆ. ಪ್ರದೀಪ (36) ಮೃತಪಟ್ಟ ಯುವ ರೈತ. ಸ್ವಂತ ತೋಟದಲ್ಲಿ ಪ್ರದೀಪ ಅಲ್ಯುಮಿನಿಯಂನ ದೋಟಿಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದಾಗ ಪಕ್ಕದಲ್ಲಿದ್ದ ವಿದ್ಯುತ್‌ ಲೈನ್‌ ಗೆ ದೋಟಿ ತಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬೀರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

– ಶಿಕಾರಿಪುರ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ…!!

ಶಿಕಾರಿಪುರ : ಚಲಿಸುತ್ತಿದ್ದ ಕಾರಿಗೆ ಹಠಾತ್ ಆಗಿ ತಗುಲಿದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗಡಿಭಾಗದ ಸಾಲೂರು ಬಳಿ ರಾತ್ರಿ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

– ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ..!

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೋಡಿ ಗ್ರಾಮದ ಮಾಗಲು ನಿವಾಸಿ ಅಜಿತ್ ಕುಮಾರ್ ಎಂ.ಪಿ (28) ಬಂಧಿತ ಆರೋಪಿ. ನಗರ ಠಾಣೆ ಪಿಎಸ್‌ಐ ಶಿವಾನಂದ್‌ ವೈ.ಕೆ ಹಾಗೂ ಸಿಬ್ಬಂದಿಗಳಾದ ಎಎಸ್‌ಐ ಕುಮಾರ್, ವಿಶ್ವನಾಥ್, ಪ್ರವೀಣ್, ಚಾಲಕ ಶಶಿಧ‌ರ್ ಗಸ್ತು ತಿರುಗುತ್ತಿದ್ದಾಗ ನಿಟ್ಟೂರು ಬಸ್ ನಿಲ್ದಾಣದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತನೆ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಈತನನ್ನು ವಶಕ್ಕೆ ಪಡೆದಿದ್ದಾರೆ. ನಂತರ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಈತನ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

– ಸೊರಬ : ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ..!!

ಸೊರಬ: ಪಟ್ಟಣದ ಸಾಗರ ರಸ್ತೆಯ ಮನೆಯೊಂದರಲ್ಲಿ ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಾಂತಮ್ಮ ಬಸವರಾಜ್ (67) ಮೃತರು. ಸಾಗರ ರಸ್ತೆಯಲ್ಲಿ ಒಂಟಿಯಾಗಿ ವಾಸವಿದ್ದ ಶಾಂತಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಮಲಗಿದ ಸ್ಥಿತಿಯಲ್ಲಿಯೇ ಅವರ ಮೃತದೇಹ ಕಂಡುಬಂದಿದೆ. ನಾಲೈದು ದಿನಗಳ ಹಿಂದೆ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮನೆಯಿಂದ ದುರ್ವಾಸನೆ ಬರುವುದನ್ನು ಗಮನಿಸಿದ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸಿಪಿಐ ಎಲ್‌. ರಾಜಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.