ಮಲೆನಾಡಲ್ಲಿ ಸಿಎಂ ಆಗಮನದ ಸಂಭ್ರಮ!
– ನರಸಿಂಹರಾಜಪುರದ ಹೊನ್ನೇ ಕೊಡಿಗೆಯಲ್ಲಿ ತಮ್ಮ ಹೆಸರಿನ ನೂತನ ಸೇತುವೆ ಉದ್ಘಾಟನೆ ಮಾಡಿದ ಸಿಎಂ
– 200 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಉದ್ಘಾಟನೆ: ರಾಜೇಗೌಡ ಸಾಥ್
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ನರಸಿಂಹರಾಜಪುರ: ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.
ಅಚ್ಚರಿ ಎಂದರೆ ಈ ಸೇತುವೆಗೆ ಸಿದ್ದರಾಮಯ್ಯ ಸೇತುವೆ ಎಂದೇ ಹೆಸರು ಕೂಡ ಇಡಲಾಗಿದೆ. ಇದರ ಜತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ & ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದರು.
ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ, ಡಾ. ಆರತಿ ಕೃಷ್ಣ, ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ನರಸಿಂಹ ರಾಜಪುರ ತಾಲ್ಲೂಕಿನಲ್ಲಿ ನಡೆಯುವ ಶಂಕುಸ್ಥಾಪನೆ, ಉದ್ಘಾಟನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಏಪ್ರಿಲ್ 12ರಂದೆ ಮುಖ್ಯಮಂತ್ರಿ ನರಸಿಂಹರಾಜ ಪುರಕ್ಕೆ ಆಗಮಿಸಿದ್ದರು. ರಾಜ್ಯದ ಹಾಗೂ ಮಲೆನಾಡಿನ ಪ್ರಮುಖ ನಾಯಕರು ಹಾಜರಿದ್ದರು.
800 ಮೀಟರ್ ಸೇತುವೆ 38 ಕೋಟಿ ವೆಚ್ಚದಲ್ಲಿ ನಿರ್ಮಾಣ!
ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಜಿ.ರಾಜೇಗೌಡ ಅವರು “38.5೦ ಕೋಟಿ ರೂಪಾಯಿ ವೆಚ್ಚದಲ್ಲಿ ನರಸಿಂಹರಾಜಪುರ ಮತ್ತು ಭದ್ರಾ ನದಿಯ ನಡುವೆ ಸಂಪರ್ಕ ಸೇತುವೆ ನಿರ್ಮಾಣಗೊಂಡಿದ್ದು, ಭದ್ರ ನದಿಗೆ ಅಣೆಕಟ್ಟು ನಿರ್ಮಾಣ ಮಾಡುವ ಸಂದರ್ಭದಲ್ಲಿ ಅನೇಕ ಪ್ರದೇಶಗಳು ಮುಳುಗಡೆಯಾಗಿ, ನೂರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದರು ಅವರ ಬಹು ವರ್ಷಗಳ ಬೇಡಿಕೆಯ ಮೇರೆಗೆ ಈ ಸೇತುವೆ ನಿರ್ಮಾಣಗೊಂಡಿದೆ. ಪ್ರವಾಸೋದ್ಯಮ ದೃಷ್ಟಿಯಲ್ಲಿ ಈ ಸೇತುವೆ ಮಹತ್ವದ್ದಾಗಿದೆ. ಸುಮಾರು 800 ಮೀಟರ್ ಉದ್ದ ಇದ್ದು ನೋಡಲು ಸುಂದರ ಜಾಗವಾಗಿದೆ. ಎರಡು ವರ್ಷಗಳ ಹಿಂದೆ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದು, ಇದೀಗ ಸೇತುವೆ ನಿರ್ಮಾಣಗೊಂಡ ಬಳಿಕ ಅವರೇ ತಮ್ಮ ಹೆಸರಿನ ಸೇತುವೆಗೆ ಬಂದು ಉದ್ಘಾಟನೆಗೊಳಿಸುತ್ತಿರುವುದು ಸಂತಸದ ಸಂಗತಿ.








