- ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ನಾಯಕರ ಅಗ್ರಹ
- ಸರಕಾರದ ವಿರುದ್ಧ ಮಂಜುನಾಥ ಗೌಡ ಆಕ್ರೋಶ
NAMMUR EXPRESS
ತೀರ್ಥಹಳ್ಳಿ: ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಇದೀಗ ಹೋರಾಟ ಶುರು ಮಾಡಿದ್ದಾರೆ.
ಜನತೆಗೆ ಲಸಿಕೆ ನೀಡುವಂತೆ ಕಾಂಗ್ರೆಸ್ ಎಲ್ಲಾ ತಾಲೂಕಲ್ಲಿ ಮನವಿ ಅಭಿಯಾನ ಶುರು ಮಾಡಿದ್ದು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ನಾಯಕ ಡಾ.ಆರ್.ಎಂ. ಮಂಜುನಾಥ ಗೌಡ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ತಾಲೂಕು ಕಚೇರಿ ಮುಂದೆ ಸೇರಿದ ಕಾಂಗ್ರೆಸ್ ನಾಯಕರು ತಾಲೂಕಿನ ಎಲ್ಲಾ ಜನತೆಗೆ ಲಸಿಕೆ ನೀಡುವಂತೆ ಒತ್ತಾಯಿಸಿದರು.
ಡಾ.ಆರ್.ಎಂ.ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಡುಬರಾಘವೇಂದ್ರ,ಹಿರಿಯ ಕಾಂಗ್ರೆಸ್ ಮುಖಂಡರಾದ ಹಾರೋಗೊಳಿಗೆ ಪದ್ಮನಾಭ, ಬಾಳೆಹಳ್ಳಿ ಪ್ರಭಾಕರ್, ಕೆಳಕೆರೆ ದಿವಾಕರ್,ಬಿ.ಎಸ್ ಯಲ್ಲಪ್ಪ, ಡಿ.ಎಸ್.ವಿಶ್ವನಾಥ್ ಶೆಟ್ಟಿ, ಗಣಪತಿ, ಸುಶೀಲಾ ಶೆಟ್ಟಿ, ನಾಗರಾಜ್ ಪೂಜಾರಿ ಸೇರಿದಂತೆ ಪಟ್ಟಣ ಪಂಚಾಯ್ತಿ ಹಾಲಿ, ಮಾಜಿ ಸದಸ್ಯರು, ಎಲ್ಲಾ ಚುನಾಯಿತ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ರಾಜ್ಯದ ಎಲ್ಲಾ ಸುದ್ದಿ, ಜಾಹೀರಾತಿಗಾಗಿ “NAMMUR EXPRESS” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ, ಸಬ್ಸ್ಕ್ರೈಬ್ ಆಗಿ. ವಾಟ್ಸಾಪ್ನಲ್ಲಿ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು, ಊರು, ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು..!.