Categories
ಮಲ್ನಾಡ್

ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ..ಧಿಕ್ಕಾರ !

ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ..ಧಿಕ್ಕಾರ !

– ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆಯಲ್ಲಿ ಬಿಜೆಪಿ ಪ್ರತಿಭಟನೆ
– ರಸ್ತೆಯಲ್ಲೇ ಮಲಗಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು!

NAMMUR EXPRESS NEWS
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ರಾಜ್ಯದ್ಯಂತ ನಡೆಯುತ್ತಿರುವ ರಸ್ತೆ ತಡೆಯ ಭಾಗವಾಗಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ರಸ್ತೆ ತಡೆಯುವ ಮೂಲಕ ಪ್ರತಿಭಟನೆಯನ್ನು ನಡೆಸಲಾಯಿತು
ನಗರಾಧ್ಯಕ್ಷರಾದ ಕೆ ಎಸ್ ಪುಷ್ಪರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಬೆಳವಾಡಿ, ಓಬಿಸಿ ಮೋರ್ಚ ರಾಜ್ಯ ಕಾರ್ಯದರ್ಶಿಗಳಾದ ಬಿ ರಾಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಸಿ ಎಂ ಕೌಶಿಕ್, ಜಿ ಶಂಕರ್, ನಗರಸಭಾ ಉಪಾಧ್ಯಕ್ಷರಾದ ಅಮೃತೇಶ್, ನಗರಸಭಾ ಸದಸ್ಯರಾದ ರಾಜು, ಅರುಣ್, ವಕ್ತಾರರಾದ ಪುಟ್ಟಸ್ವಾಮಿ, ಕುಪ್ಪೇನಳ್ಳಿ ಸತೀಶ್, ವೆಂಕಟೇಶ ರಾಜ ಅರಸ್, ಸಗಾಯ ದಾಸ್ ಕಬೀರ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೊಪ್ಪದಲ್ಲಿ ಬಿಜೆಪಿ ಹೋರಾಟ: ಕಾರ್ಯಕರ್ತರ ಸಿಟ್ಟು!

ಕೊಪ್ಪ: ರಾಜ್ಯ ಸರ್ಕಾರದ ಅಗತ್ಯ ದಿನಬಳಕೆ ಸಾಮಾಗ್ರಿಗಳ ಬೆಲೆ ಹಾಗೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಹಲವೆಡೆ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೊಪ್ಪದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಪುಣ್ಯಪಾಲ್ ಭಾಗವಹಿಸಿದ್ದರು, ಉಳಿದಂತೆ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ನಿಲುವಾಗಿಲು,ಕೊಪ್ಪ ತಾಲೂಕು ಪ್ರಧಾನಕಾರ್ಯದರ್ಶಿಗಳಾದ ಅರುಣ್ ಶಿವಪುರ ಪ್ರಮುಖರಾದ ಜಯಂತ್ ನಿಲುವಾಗಿಲು,ಬಿಜೆಪಿ ಕೊಪ್ಪ ತಾಲೂಕಿನ ವಿವಿಧ ಮೋರ್ಚಾಗಳ ಪದಾಧಿಕಾರಿಗಳು,ಪ್ರಮುಖರು,ಕಾರ್ಯಕರ್ತರು ಭಾಗವಹಿಸಿದ್ದರು. ರಸ್ತೆ ತಡೆ ನಡೆಸಿದ ಕಾರ್ಯಕರ್ತರನ್ನು ಪೋಲೀಸರು ಮನವೊಲಿಸಲು ಪ್ರಯತ್ನಿಸಿದರಾದರೂ ಇದನ್ನ ಲೆಕ್ಕಿಸದೇ ಪ್ರತಿಭಟನಾಕಾರರು ಪ್ರತಿಭಟಿಸಿದರು ಕೊನೆಗೆ ಪೋಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು.

ಮೂಡಿಗೆರೆಯಲ್ಲಿ ದೀಪಕ್ ದೊಡ್ಡಯ್ಯ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಮೂಡಿಗೆರೆ ಪಟ್ಟಣದಲ್ಲಿ ಬಿಜೆಪಿ ನಾಯಕ ದೀಪಕ್ ದೊಡ್ಡಯ್ಯ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.