Categories
ಕರಾವಳಿ ಚಿಕ್ಕಮಗಳೂರು ತೀರ್ಥಹಳ್ಳಿ ಬೆಂಗಳೂರು ಮಂಗಳೂರು ಮಲ್ನಾಡ್ ರಾಜ್ಯ ಶಿವಮೊಗ್ಗ

ಗ್ರಾಮ ಪಂಚಾಯತ್ ಚುನಾವಣೆಗೆ ಸಜ್ಜು!

ಗ್ರಾಮ ಪಂಚಾಯತ್ ಚುನಾವಣೆಗೆ ಸಜ್ಜು!
– ಗ್ರಾ ಪಂ ಚುನಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ
– ಗ್ರಾ ಪಂ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯದ ಮಾಹಿತಿ
– ಎಲ್ಲಾ ಸಿಇಓಗಳಿಗೆ ಪಂಚಾಯತ್ ರಾಜ್ ಇಲಾಖೆಯಿಂದ ಸೂಚನೆ

 

NAMMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಚುನಾವಣೆಗೆ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದ್ದರೇ, ಇತ್ತ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಪಂಚಾಯತ್ ರಾಜ್ ಇಲಾಖೆ ರಾಜ್ಯದ ಎಲ್ಲಾ ಸಿಇಓಗಳಿಗೆ ಸೂಚಿಸಿದೆ.

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2025-26 ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ದೃಢೀಕರಿಸಿ ಈ ಕಛೇರಿಯ ಇ-ಮೇಲ್ ವಿಳಾಸ prcdirdev@gmail.com : 24-10-2025 ರೊಳಗಾಗಿ ಸಲ್ಲಿಸುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.