Categories
ಉಡುಪಿ ಕರಾವಳಿ ಚಿಕ್ಕಮಗಳೂರು ತೀರ್ಥಹಳ್ಳಿ ಬೆಂಗಳೂರು ಮಂಗಳೂರು ಮಲ್ನಾಡ್ ರಾಜ್ಯ ಶಿವಮೊಗ್ಗ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ..!!

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ..!!
– ಅಕ್ಟೋಬರ್‌ 9ರಿಂದ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
– ಅಕ್ಟೋಬರ್‌ 11ರ ವರೆಗೂ ಮಳೆ ಮುಂದುವರಿಯುವ ಸಾಧ್ಯತೆ

NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಲಿದೆ. ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 24 ಗಂಟೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನಲಾಗಿದೆ. ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಸೇರಿ ಹಳೇ ಮೈಸೂರು ಭಾಗ, ಬೆಂಗಳೂರು ಹಾಗೇ ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕದಾದ್ಯಂತ ವ್ಯಾಪಕ ಮಳೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಂತಹ ಇತರ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರಿಂದ ಮತ್ತೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಅಬ್ಬರ ಅಕ್ಟೋಬರ್‌ 11ರ ವರೆಗೂ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.