Categories
ಕರಾವಳಿ ಮಲ್ನಾಡ್

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್!
– ಜೂ.15ರಿಂದ ಸೆಪ್ಟೆಂಬ‌ರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ
– ಮಳೆಯಲ್ಲಿ ಘಾಟಿ ರಸ್ತೆ ಕುಸಿಯುವ ಭೀತಿ ಹಿನ್ನೆಲೆ ಆದೇಶ

NAMMUR EXPRESS NEWS
ಶಿವಮೊಗ್ಗ/ ಉಡುಪಿ / ಚಿಕ್ಕಮಗಳೂರು: ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಲೆನಾಡು ಮತ್ತು ಕರಾವಳಿ ಸಂಪರ್ಕ ಬೆಸೆಯುವ ಆಗುಂಬೆ ಘಾಟಿಯಲ್ಲಿ ಜೂ.15ರಿಂದ ಸೆಪ್ಟೆಂಬ‌ರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.
ಭಾರೀ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿಲಾಗಿದೆ.

ಬದಲಿ ಮಾರ್ಗ ಹೇಗೆ..?

ಉಡುಪಿಯಿಂದ ತೀರ್ಥಹಳ್ಳಿ ಅಥವಾ ಇತರೆ ಮಾರ್ಗದಲ್ಲಿ ಸಂಚಾರ ಮಾಡುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ..

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.