Categories
ಮಲ್ನಾಡ್

ಹಿಟ್ ಅಂಡ್ ರನ್: ಮಹಿಳೆ ಬಲಿ!

  • ತೀರ್ಥಹಳ್ಳಿಯ ರಂಜದಕಟ್ಟೆ ಬಳಿ ಘಟನೆ
  • ಅನಾಮಧೆಯ ಕಾರಿನ ಸುಳಿವು ನೀಡಿ..!


ತೀರ್ಥಹಳ್ಳಿ: ತೀರ್ಥಹಳ್ಳಿಯ ರಂಜದಕಟ್ಟೆ ಬಳಿ ಮಂಗಳವಾರ ಸಂಜೆ ಹಿಟ್ ಅಂಡ್ ರನ್ ಘಟನೆ ನಡೆದಿದ್ದು, ಓರ್ವ ಮಹಿಳೆ ಬಲಿಯಾಗಿದ್ದಾಳೆ.
ತೀರ್ಥಹಳ್ಳಿ ತಾಲೂಕು ಗಂಟೆಹಕ್ಕಲು ನಿವಾಸಿ ರಮೇಶ್ ಎಂಬುವರ ಪತ್ನಿ ಶಾರದಾ(45) ಹಾಲು ಕೊಡಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗದಿಂದ ತೀರ್ಥಹಳ್ಳಿ ಕಡೆಯಿಂದ ಬಂದ ಮಾರುತಿ ಓಮಿನಿ ಕಾರೊಂದು ಬಂದು ಡಿಕ್ಕಿ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಶರೀರವನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಇಡಲಾಗಿದ್ದು ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಓಮ್ನಿ ಕಾರು ಪರಾರಿಯಾಗಿದ್ದು, ಶೋಧ ನಡೆಯುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.