ಮಲೆನಾಡ ಶಾಲೆ, ಕಾಲೇಜಿಗೆ ರಜೆ ಘೋಷಣೆ
– ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ರಜೆ
– ಯಾವ ಯಾವ ತಾಲೂಕಿಗೆ ರಜೆ: ಇಲ್ಲಿದೆ ಮಾಹಿತಿ
NAMMUR EXPRESS NEWS
ಶಿವಮೊಗ್ಗ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಕೂಡ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹೊಸನಗರ, ಸೊರಬ ತಾಲ್ಲೂಕುಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಭದ್ರಾವತಿ, ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಲ್ಲಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ರಜೆ ಘೋಷಣೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಜಿಲ್ಲಾಡಳಿತ ಮುಂಜಾಗ್ರತ ಕ್ರಮವಾಗಿ ಶುಕ್ರವಾರವು ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್ ಪುರ ಮತ್ತು ಕಳಸ ತಾಲೂಕುಗಳಲ್ಲಿ ಸಂಪೂರ್ಣ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಚಿಕ್ಕಮಗಳೂರು ತಾಲೂಕಿನ ನಗರಸಭೆ, ಲಕ್ಯಾ ಮತ್ತು ಅಂಬಳೆ ಹೋಬಳಿಗಳನ್ನು ಹೊರತುಪಡಿಸಿ ಉಳಿದ ಹೋಬಳಿಗಳ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.