Categories
ಮಲ್ನಾಡ್

ಹುಲಿ ಉಗುರು ಚಿನ್ನದ ಸರ ಹಾಕಿದ್ರೆ ಅರೆಸ್ಟ್ ಆಗ್ತೀರಾ!

ಹುಲಿ ಉಗುರು ಚಿನ್ನದ ಸರ ಹಾಕಿದ್ರೆ ಅರೆಸ್ಟ್ ಆಗ್ತೀರಾ!
– ಹುಲಿ ಉಗುರು ಧರಿಸಿದ್ದ ಅರ್ಚಕರಿಬ್ಬರ ಬಂಧನ..!
– ಖಾಂಡ್ಯದಲ್ಲಿ ಪ್ರಕರಣ: ಮೂಡಿಗೆರೆಯಲ್ಲೂ ಇಬ್ಬರು ಅರೆಸ್ಟ್
– ರಾಜ್ಯದಲ್ಲಿ ಎಲ್ಲಾ ಕಡೆ ಈಗ ಹುಲಿ ಉಗುರು ಸದ್ದು!

NAMMUR EXPRESS NEWS
ಬಾಳೆಹೊನ್ನೂರು: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಪ್ರಧಾನ ಅರ್ಚಕರಿಬ್ಬರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದ್ದು ಇದೀಗ ಹುಲಿ ಉಗುರು ಸೇರಿ ಪ್ರಾಣಿ ಉತ್ಪನ್ನ ಹಾಕುವವರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಪ್ರಸಿದ್ಧ ಮಾರ್ಕಾಂಡೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಬಂಧಿತರು. ಸದ್ಯ ಇಬ್ಬರನ್ನು ಅರಣ್ಯ ಇಲಾಖೆ ತೀವ್ರ ವಿಚಾರಣೆ ನಡೆಸುತ್ತಿದೆ. ಬಂಧಿತರಿಂದ ಮೂರು ಹುಲಿ ಹುಗುರು ವಶಕ್ಕೆ ಪಡೆಯಲಾಗಿದೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಲಿ ಉಗುರು ಧರಿಸಿದ್ದವನ ಬಸ್ಸಲ್ಲೇ ಹಿಡಿದರು!

ಹುಲಿ ಉಗುರು ಧರಿಸಿದ್ದ ಆರೋಪದಡಿ ಮೂಡಿಗೆರೆ ತಾಲೂಕಿನ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ತಾಲೂಕಿನ ಬಿ.ಹೊಸಳ್ಳಿಯ ಕುಂಡ್ರ ನಿವಾಸಿ ಸತೀಶ್ ಮತ್ತು ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ರನ್ನು ಬಂಧಿಸಲಾಗಿತ್ತು.ಹುಲಿ ಉಗುರು ಧರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಸತೀಶ್‌ನನ್ನು ಚಿಕ್ಕಮಗಳೂರು ಸಮೀಪದ ಮತ್ತಾವರ ಅರಣ್ಯ ಮಾಹಿತಿ ಕೇಂದ್ರದ ಬಳಿ ತಡೆದು ಬಂಧಿಸಿದ್ದರು.

ಸತೀಶ್ ಕುತ್ತಿಗೆಗೆ ಧರಿಸಿದ್ದ ಬೆಳ್ಳಿ ಸರದಲ್ಲಿ ಹುಲಿ ಉಗುರು ಇರುವುದು ಪತ್ತೆಯಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಉಗುರನ್ನು ತನಗೆ ಮೂಡಿಗೆರೆ ತಾಲೂಕಿನ ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ನೀಡಿದ್ದು ಎಂದು ಮಾಹಿತಿ ನೀಡಿದ್ದನು. ನಂತರ ರಂಜಿತ್‌ನನ್ನು ಹುಲ್ಲೇ ಮನೆಯ ನಿವಾಸದಲ್ಲಿ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ರಾಜ್ಯದ ಎಲ್ಲಾ ಕಡೆ ಸಂಚಲನ!

ಬಿಗ್ ಬಾಸ್ ಅಲ್ಲಿದ್ದ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ರಾಜ್ಯಾದ್ಯಂತ ಅರಣ್ಯ ಇಲಾಖೆ ಹುಲಿ ಉಗುರು ಧರಿಸಿದವರ ಮೇಲೆ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಈ ನಡುವೆ ನಟರು, ರಾಜಕಾರಣಿಗಳು, ಮಠದ ಸ್ವಾಮೀಜಿಗಳ ಮೇಲೂ ಈಗ ಕಣ್ಣು ಬಿದ್ದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.